ಬಿಜೆಪಿ ಶಾಸಕರ ಆರೋಪಗಳ ಕುರಿತು ನ್ಯಾಯಾಂಗ ತನಿಖೆಯಾಗಬೇಕು: ಡಿ.ಕೆ. ಶಿವಕುಮಾರ್

ಸಚಿವ ಸಂಪುಟ ಕುರಿತು ಬಿಜೆಪಿ ಶಾಸಕರೇ ಗಂಭೀರ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ಸಿಡಿ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ.

Published: 15th January 2021 07:26 AM  |   Last Updated: 15th January 2021 12:12 PM   |  A+A-


DK Shivkumar

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Posted By : Manjula VN
Source : The New Indian Express

ಬೆಂಗಳೂರು: ಸಚಿವ ಸಂಪುಟ ಕುರಿತು ಬಿಜೆಪಿ ಶಾಸಕರೇ ಗಂಭೀರ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ಸಿಡಿ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ. 

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದರೆ ಬ್ಲಾಕ್ ಮೇಲರ್ಸ್ ಜನತಾ ಪಕ್ಷ. ಹಾಗೆಂದು ಆ ಪಕ್ಷದ ನಾಯಕರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್ ಮೇಲ್, ಲಂಚದ ಆರೋಪ ಕೇಳಿ ಬಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಇದರ ನೈತಿಕ ಹೊಣೆ ಹೊರಬೇಕಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಸಂಪುಟ ವಿಸ್ತರಣೆ ಮಾಡಿದ್ದಾರೆ. ಸಂಪುಟಕ್ಕೆ ಯಾರನ್ನು ಬೇಕಾದರೂ ಸೇರಿಸಿಕೊಳ್ಳಬಹುದು, ಅದಕ್ಕೆ ನಮ್ಮ ಯಾವ ಅಭ್ಯಂತರವೂ ಇಲ್ಲ ಎಂದರು.

ಬ್ಲಾಕ್ ಮೇಲರ್ ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಬಿಜೆಪಿ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಆರೋಪ ಮಾಡಿದ್ದಾರೆ. ಸಿ.ಡಿ. ಬಗ್ಗೆಯೂ ಬಿಜೆಪಿ ನಾಯಕರು ಪ್ರಸ್ತಾಪಿಸಿದ್ದಾರೆ. ಸಿಡಿಯಲ್ಲಿ ಏನಿದೆ ಎಂಬುದು ಅದನ್ನು ನೋಡಿ, ಚರ್ಚೆ ಮಾಡಿರುವ ಬಿಜೆಪಿಯವರಿಗೆ ಗೊತ್ತಿದೆ ಎಂದರು.


Stay up to date on all the latest ರಾಜಕೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp