ಮಂತ್ರಿ ಸ್ಥಾನದ ಚರ್ಚೆ ಮುಗಿದ ಅಧ್ಯಾಯ: ಶಾಸಕ ಮುನಿರತ್ನ

ಸಚಿವ ಸ್ಥಾನ ಸದ್ಯಕ್ಕೆ ಮುಗಿದ ಅಧ್ಯಾಯ. ಆ ಬಗ್ಗೆ ಈಗ ಚರ್ಚೆ ಬೇಡ. ಬಿಜೆಪಿ ವರಿಷ್ಠರು ಹಾಗೂ ಮುಖ್ಯಮಂತ್ರಿ ನನಗೆ ಸಚಿವ ಸ್ಥಾನ ನೀಡಲು ಬದ್ಧರಿದ್ದು, ಅದಕ್ಕೂ ಕಾಲ ಕೂಡಿ ಬರುತ್ತದೆ ಎಂದು ರಾಜ ರಾಜೇಶ್ವರಿ ನಗರದ ಶಾಸಕ ಮುನಿರತ್ನ ಅಭಿಪ್ರಾಯಪಟ್ಟಿದ್ದಾರೆ. 

Published: 16th January 2021 08:08 AM  |   Last Updated: 16th January 2021 12:59 PM   |  A+A-


muniratna

ಮುನಿರತ್ನ

Posted By : Manjula VN
Source : The New Indian Express

ದಾವಣಗೆರೆ: ಸಚಿವ ಸ್ಥಾನ ಸದ್ಯಕ್ಕೆ ಮುಗಿದ ಅಧ್ಯಾಯ. ಆ ಬಗ್ಗೆ ಈಗ ಚರ್ಚೆ ಬೇಡ. ಬಿಜೆಪಿ ವರಿಷ್ಠರು ಹಾಗೂ ಮುಖ್ಯಮಂತ್ರಿ ನನಗೆ ಸಚಿವ ಸ್ಥಾನ ನೀಡಲು ಬದ್ಧರಿದ್ದು, ಅದಕ್ಕೂ ಕಾಲ ಕೂಡಿ ಬರುತ್ತದೆ ಎಂದು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅಭಿಪ್ರಾಯಪಟ್ಟಿದ್ದಾರೆ. 

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ದೈವಕೃಪೆ ಬೇಕು. ಯಾವಾಗ ಕಾಲ ಕೂಡಿ ಬರುತ್ತದೋ ನೋಡೋಣ. ನನಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಕಾರಣ ಏನೂ ಇಲ್ಲ. ಆದರೂ, ಯಾಕೆ ಕೈಬಿಟ್ಟರೋ ಗೊತ್ತಿಲ್ಲ. ಅಧಿಕಾರ ಸಿಗಲಿಲ್ಲವೆಂದು ಆರೋಪ-ಪ್ರತ್ಯಾರೋಪ ಮಾಡುವವನು ನಾನಲ್ಲ. ಸದ್ಯ ನಾನು ಪಕ್ಷ ಸಂಘಟನೆ, ನನ್ನ ರಾಜರಾಜೇಶ್ವರಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ತಲೆ ಕೆಡಿಸಿಕೊಳ್ಳುತ್ತೇನೆಂದು ಹೇಳಿದ್ದಾರೆ. 

ಇದೇ ವೇಳೆ ರಹಸ್ಯ ಸಿಡಿ ಕುರಿತ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ. ಅವರಲ್ಲಿ ಸಾಕ್ಷ್ಯಾಧಾರಗಳಿದ್ದರೆ, ಬಹಿರಂಗಪಡಿಸಲಿ ಎಂದು ತಿಳಿಸಿದ್ದಾರೆ.

Stay up to date on all the latest ರಾಜಕೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp