ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಯೋಗೇಶ್ವರ್ ಕೂಡ ಕಾರಣ: 'ಸೈನಿಕ' ಪರ ಶ್ರೀನಿವಾಸ್ ಪ್ರಸಾದ್ ಬ್ಯಾಟಿಂಗ್

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದವರಲ್ಲಿ ಸಿಪಿ ಯೋಗೇಶ್ವರ್ ಕೂಡ ಒಬ್ಬರು. ಆದ್ದರಿಂದ, ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದು ಸರಿಯಿದೆ ಎಂದು ವಿ ಶ್ರೀನಿವಾಸ್‌ ಪ್ರಸಾದ್‌ ಹೇಳಿದ್ದಾರೆ.

Published: 16th January 2021 09:34 AM  |   Last Updated: 16th January 2021 12:37 PM   |  A+A-


Srinivas prasad

ಶ್ರೀನಿವಾಸ್ ಪ್ರಸಾದ್

Posted By : Shilpa D
Source : The New Indian Express

ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದವರಲ್ಲಿ ಸಿಪಿ ಯೋಗೇಶ್ವರ್ ಕೂಡ ಒಬ್ಬರು. ಆದ್ದರಿಂದ, ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದು ಸರಿಯಿದೆ ಎಂದು ವಿ ಶ್ರೀನಿವಾಸ್‌ ಪ್ರಸಾದ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲು ಎಚ್ ವಿಶ್ವನಾಥ್ ರೀತಿಯಲ್ಲಿ ಯೋಗೇಶ್ವರ್ ಸಹ ಕಾರಣರಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ವಿಶ್ವನಾಥ್ ಅವರಿಗೆ ಅಸಮಾಧಾನ ಇರುವುದು ಸರಿ. ಆದರೆ, ಸಚಿವ ಸ್ಥಾನ ನೀಡಿದ್ದು ಏಕೆ ಎಂದು ಪ್ರಶ್ನೆ ಮಾಡಬಾರದು ಎಂದರು.

ಈ ಕುರಿತು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ. ಯಾರನ್ನು ಸಚಿವರನ್ನಾಗಿ ಮಾಡಬೇಕು, ಯಾರನ್ನು ಮಾಡಬಾರದು ಎಂಬುದು ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು. ಸದ್ಯ ವಿಶ್ವನಾಥ್ ಸಿಟ್ಟಲ್ಲಿದ್ದಾರೆ. ಬಳಿಕ ಅವರನ್ನು ಕರೆಸಿ ಮಾತನಾಡುತ್ತೇನೆ ಎಂದರು.

ಮುನಿರತ್ನ ಅವರನ್ನು ಸಚಿವರನ್ನಾಗಿ ಮಾಡಬೇಕಿತ್ತು ಎಂದ ಅವರು,ಮುಂದೆ ಅವಕಾಶಗಳು ಸಿಗುತ್ತವೆ ಎಂದ ಅವರು, ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ಈಗಲೂ ಅಸಮಾಧಾನವಿದೆ, ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಿಲ್ಲ ಎಂದರು.  ನಾಗೇಶ್ ವಿರುದ್ಧ ಆರೋಪಗಳು ಕೇಳಿ ಬಂದ ಹಿನ್ನೆಲೆ ರಾಜೀನಾಮೆ ಪಡೆಯಲಾಗಿದೆ ಎಂದರು. 


Stay up to date on all the latest ರಾಜಕೀಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp