ಅಮಿತ್ ಶಾ ರಾಜ್ಯಕ್ಕೆ ಆಗಮನ: ಎರಡು ದಿನಗಳ ಪ್ರವಾಸ ಆರಂಭ
ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದ್ದು, ಈ ಮೂಲಕ ಎರಡು ದಿನಗಳ ಪ್ರವಾಸವನ್ನು ಅವರು ಆರಂಭಿಸಿದ್ದಾರೆ.
Published: 16th January 2021 03:55 PM | Last Updated: 16th January 2021 03:55 PM | A+A A-

ಅಮಿತ್ ಶಾ ಅವರನ್ನು ಸ್ವಾಗತಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದ್ದು, ಈ ಮೂಲಕ ಎರಡು ದಿನಗಳ ಪ್ರವಾಸವನ್ನು ಅವರು ಆರಂಭಿಸಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಪು ಗುಲಾಬಿ ನೀಡಿ ಆತ್ಮೀಯವಾಗಿ ಬರಮಾಡಕೊಂಡರು. ಬಳಿಕ ಇಬ್ಬರೂ ಒಂದೇ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಅಮಿತ್ ಶಾ ಅವರು ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ವಿಧಾನಸೌಧದ ಮುಂಭಾಗ ಇಆರ್ಎಸ್ಎಸ್ ವಾಹನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಬಳಿಕ ಬ್ಯಾಂಕ್ವೆಟ್ ಹಾಲ್ನಲ್ಲಿ ಗೃಹ ಇಲಾಖೆಯ ವರ್ಚುವಲ್ ಕಾರ್ಯಕ್ರಮಗಳಲ್ಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಅವರು ಭೇಟಿ ನೀಡಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಾಳೆ ಬೆಳಗಾವಿಯಲ್ಲಿ ಬಹಿರಂಗ ಸಮಾವೇಶ ಉದ್ದೇಶಸಿ ಮಾತನಾಡಲಿದ್ದಾರೆ.