ಬಿಜೆಪಿ ನಾಯಕರಿಗೆ ಅಮಿತ್ ಶಾ ಮುಂದೆ ಮಾತನಾಡುವ ಧೈರ್ಯವಿಲ್ಲ: ಬಂಡೆಪ್ಪ ಕಾಶೆಂಪೂರ

ಬಿಜೆಪಿ ನಾಯಕರಿಗೆ ಅಮಿತ್ ಶಾ ಮುಂದೆ ಮಾತನಾಡುವ ಧೈರ್ಯವಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದರು.

Published: 20th January 2021 10:16 AM  |   Last Updated: 20th January 2021 10:16 AM   |  A+A-


bandeppa kashempur

ಬಂಡೆಪ್ಪ ಕಾಶೆಂಪೂರ್

Posted By : Shilpa D
Source : UNI

ಬೆಂಗಳೂರು: ಬಿಜೆಪಿ ನಾಯಕರಿಗೆ ಅಮಿತ್ ಶಾ ಮುಂದೆ ಮಾತನಾಡುವ ಧೈರ್ಯವಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಅವಗಣನೆ ವಿಚಾರವಾಗಿ ಪ್ರ ತಿಕ್ರಿಯಿಸುತ್ತಾ, ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ತಮಿಳುನಾಡಿಗೆ ಹೋದರೆ ಬೇರೆ ಭಾಷೆ ಇದ್ಯಾ. ಅಲ್ಲಿ ತಮಿಳು ಬಿಟ್ಟರೆ ಬೇರೆ ಹಾಕಲ್ಲ. ಇಲ್ಲೂ ಹಾಗೆಯೇ ಇರಬೇಕಲ್ವಾ?. 

ಪ್ರೊಟೋಕಾಲ್ ಇರಬಹುದು. ಆದರೆ ಕನ್ನಡ ಹಾಕಬಾರದು ಅಂತ ಎಲ್ಲಾದ್ರೂ ಹೇಳಿದ್ಯಾ? ನಮ್ಮ ಸರ್ಕಾರ ಇಚ್ಛಾಶಕ್ತಿಯನ್ನು ತೋರಬೇಕು. ಇದನ್ನ ನಾನು ಬಲವಾಗಿ ಖಂಡಿಸುತ್ತೇನೆ ಎಂದು ತಿಳಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆ ಉದ್ಧಟತನದ ಹೇಳಿಕೆ. ನೆಲ,ಜಲ, ಭಾಷೆ ವಿಚಾರದಲ್ಲಿ ನಾವೆಲ್ಲ ಒಂದೇ. ಧಕ್ಕೆ ಬಂದರೆ ನಾವೆಲ್ಲರೂ ಹೋರಾಟ ಮಾಡುತ್ತೇವೆ ಎಂದರು.

Stay up to date on all the latest ರಾಜಕೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp