
ಧ್ರುವನಾರಾಯಣ, ರಾಮಲಿಂಗಾ ರೆಡ್ಡಿ
ಬೆಂಗಳೂರು: ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರುಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗೆ ಇವರುಗಳನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ದೆಹಲಿ ಕಾಂಗ್ರೆಸ್ ಮುಖ್ಯ ಘಟಕ ಆದೇಶಿಸಿದೆ.
INC COMMUNIQUE
— INC Sandesh (@INCSandesh) January 20, 2021
Important Notification regarding appointment of two Working Presidents for Karnataka Pradesh Congress Committee pic.twitter.com/xvIiayHFFx
ಇದಾಗಲೇ ಕೆಪಿಸಿಸಿನಲ್ಲಿ ಸತೀಶ್ ಜಾರಕಿಹೊಳಿ, ಸಲೀಂ ಇಬ್ರಾಹಿಂ ಮತ್ತು ಈಶ್ವರ್ ಖಂಡ್ರೆ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ರಾಮಲಿಂಗಾ ರೆಡ್ಡಿ ಹಾಗೂ ಧ್ರುವ ನಾರಾಯಣ್ ಇನ್ನಿಬ್ಬರು ಹೊಸ ಕಾರ್ಯಾಧ್ಯಕ್ಷರಾಗುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಕೈ ಪಾಳಯ ಯೋಜಿಸಿದೆ ಎನ್ನಲಾಗಿದೆ.