ಯಡಿಯೂರಪ್ಪ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ ಒಪ್ಪಿಕೊಂಡ ಸಿಎಂ ಪುತ್ರ ವಿಜಯೇಂದ್ರ
ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರಿಯಾದ ಪ್ರಾತಿನಿಧ್ಯ ನೀಡಲು ಬಯಸಿದ್ದರೂ, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ...
Published: 22nd January 2021 03:00 PM | Last Updated: 22nd January 2021 03:00 PM | A+A A-

ವಿಜಯೇಂದ್ರ
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸರಿಯಾದ ಪ್ರಾತಿನಿಧ್ಯ ನೀಡಲು ಬಯಸಿದ್ದರೂ, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದರಿಂದ ಅದು ಸಾಧ್ಯವಾಗಿಲ್ಲ ಮತ್ತು ಅದು ಪಕ್ಷದ ಕರ್ತವ್ಯವಾಗಿತ್ತು. ಹೀಗಾಗಿ ಅವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜೇಂದ್ರ ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನವಿದೆ ಎಂದು ಒಪ್ಪಿಕೊಂಡರು ಮತ್ತು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಪರಿಹರಿಸಲಿದ್ದಾರೆ ಎಂದು ಹೇಳಿದರು.
ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರು ಗೈರುಹಾಜರಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅದು ವೈಯಕ್ತಿಕ ಕಾರಣಗಳಿಂದಾಗಿ ಎಂದು ಹೇಳಿದರು. ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುತ್ತಾರೆ ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದರು.
ಮುಂಬರುವ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ನೀವು ಸ್ಪರ್ಧಿಸುತ್ತಿರಾ? ಎಂಬ ಪ್ರಶ್ನೆಗೆ, ನಾನು ಯಡಿಯೂರಪ್ಪ ಅವರ ಮಗನಾಗಿರುವುದರಿಂದ ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ತಂದೆ ಬಗ್ಗೆ ನನಗೆ ಹೆಮ್ಮೆ ಇದೆ. ಆದರೆ ಬಿಜೆಪಿ ಹೈಕಮಾಂಡ್ ಬಸವಕಲ್ಯಾಣ ಅಭ್ಯರ್ಥಿಯನ್ನು ನಿರ್ಧರಿಸುತ್ತದೆ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಕೆಲಸ ಮಾಡುತ್ತೇನೆ ಎಂದರು.