ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ: ಸಂಪುಟ ವಿಸ್ತರಣೆ ಕುರಿತು ಹಲವರಿಗೆ ಅತೃಪ್ತಿ, ಅಸಮಾಧಾನ!
ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಮುಗಿದಿದೆ. ಬಿಜೆಪಿ ಹೈಕಮಾಂಡ್ ನಂಬಿಕೆ ಉಳಿಸಿಕೊಂಡು ಸಿಎಂ ಯಡಿಯೂರಪ್ಪ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Published: 22nd January 2021 11:14 AM | Last Updated: 22nd January 2021 01:46 PM | A+A A-

ಯಡಿಯೂರಪ್ಪ
ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಮುಗಿದಿದೆ. ಬಿಜೆಪಿ ಹೈಕಮಾಂಡ್ ನಂಬಿಕೆ ಉಳಿಸಿಕೊಂಡು ಸಿಎಂ ಯಡಿಯೂರಪ್ಪ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತಿದ್ದಾರೆ. ಹೊಸ ಏಳು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಂತರ ಹೊಸ ಭಿನ್ನಮತ ಆರಂಭವಾಗಿದೆ.
ಅನೇಕ ಸಚಿವರು ತಮಗೆ ಬೇಕಾದ ಹುದ್ದೆ ಪಡೆದಿದ್ದಾರೆ ಎಂಬ ಆರೋಪಗಳ ಜೊತೆಗೆ ಅಸಮಾಧಾನದ ಕಟ್ಟೆಯೊಡೆದಿದೆ. ಅದರ ನಡುವೆಯೇ ಸಿಎಂ ಮಹತ್ವದ ಖಾತೆಗಳಾದ ಹಣಕಾಸು, ಇಂಧನ ಮತ್ತು ನಗಾರಭಿವೃದ್ಧಿ ಇಲಾಖೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ಜನವರಿ 13 ರಂದು ಪ್ರಮಾಣ ವಚನ ಸ್ವೀಕರಿಸಿದ ಏಳು ಶಾಸಕರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದು ಪಕ್ಷದೊಳಗೆ ಭಿನ್ನಮತ ಭುಗಿಲೇಳಲು ಕಾರಣವಾಗಿದೆ, ಹೀಗಾಗಿ ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಗೋಪಾಲಯ್ಯ ಅವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ನೀಡಲಾಗಿದೆ. ಜೆಸಿ ಮಾಧು ಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಿ, ಅವರ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಯನ್ನು ಬಸವರಾಜ ಬೊಮ್ಮಾಯಿ ಅವರಿಗೆ ಹೆಚ್ಚುವರಿಬಜವಾಬ್ದಾರಿ ನೀಡಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದ ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಖಾತೆ ವಹಿಸಲಾಗಿದೆ. ಎಂಟಿಬಿ ನಾಗರಾಜ್ ಅವರಿಗೆ ಅಬಕಾರಿ ಖಾತೆ ನೀಡಲಾಗಿದೆ. ಆರ್ ಶಂಕರ್ ಅವರಿಗೆ ಪೌರಾಡಳಿತ ನೀಡಲಾಗಿದೆ.