ಗಟ್ಟಿಯಾಗಿ ಮಾತನಾಡಿ ಒಬ್ಬಂಟಿಯಾದೆ, ಜೊತೆಗಿದ್ದ ಸ್ನೇಹಿತರೆಲ್ಲರೂ ಕೈಬಿಟ್ಟರು: ಎಚ್.ವಿಶ್ವನಾಥ್
ಜೊತೆಗಿದ್ದ ಸ್ನೇಹಿತರೆಲ್ಲರೂ ಬಿಟ್ಟು ಹೋಗಿ ಸಚಿವರಾಗಿದ್ದು, ನಾನು ಗಟ್ಟಿಧ್ವನಿಯಲ್ಲಿ ಮಾತನಾಡಿ ಒಬ್ಬಂಟಿಯಾದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ.
Published: 24th January 2021 11:47 AM | Last Updated: 24th January 2021 11:47 AM | A+A A-

ಎಚ್,ವಿಶ್ವನಾಥ್
ಚಿತ್ರದುರ್ಗ: ಜೊತೆಗಿದ್ದ ಸ್ನೇಹಿತರೆಲ್ಲರೂ ಬಿಟ್ಟು ಹೋಗಿ ಸಚಿವರಾಗಿದ್ದು, ನಾನು ಗಟ್ಟಿಧ್ವನಿಯಲ್ಲಿ ಮಾತನಾಡಿ ಒಬ್ಬಂಟಿಯಾದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂಬೈಗೆ ತೆರಳಿದ 17 ಜನರ ತಂಡವನ್ನು ನಾನು ಮುನ್ನೆಡಿಸಿದೆ. ಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಬಿಜೆಪಿಗೆ ಬಂದಿಲ್ಲ. ಸಚಿವ ಸ್ಥಾನವನ್ನು ಮತ್ತೆ ಕೇಳುವುದಿಲ್ಲ. ರಾಜ್ಯದಲ್ಲಿ ಗಟ್ಟಿ ಧ್ವನಿ ಕೇಳಿಸುತ್ತದೆ ಹೊರತು ಹೇಡಿ ಧ್ವನಿಯಲ್ಲ’ ಎಂದು ಮಾರ್ಮಿಕವಾಗಿ ನುಡಿದರು.
‘ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನ ಮೂಡಿದೆ. ಕೋವಿಡ್ಗೆ ಲಸಿಕೆ ನೀಡುವ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಡಾ.ಸುಧಾಕರ್
ಕೈಯಲ್ಲಿದ್ದರೆ ಅನುಕೂಲವಾಗುತ್ತಿತ್ತು. ಪರಿಸರ ಮತ್ತು ಅರಣ್ಯ ಖಾತೆಯನ್ನು ಬೇರ್ಪಡಿಸಿರುವುದು ಕೂಡ ಅಸಮಂಜಸವಾಗಿದೆ’ ಎಂದು ಹೇಳಿದರು.