ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಎಫ್ಐಆರ್ ಹಿಂದೆ ಬಿಜೆಪಿ ಚಿತಾವಣೆ: ಕಾಂಗ್ರೆಸ್ ನಾಯಕರ ಆರೋಪ

ಶಾಸಕಿ ಸೌಮ್ಯಾ ರೆಡ್ಡಿ ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಎಲ್ಲ ಮಹಿಳಾ ನಾಯಕಿಯರನ್ನು ಪೊಲೀಸರು ಎಳೆದಾಡುತ್ತಿದ್ದನ್ನು ನಾವೇ ನೋಡಿದ್ದೇವೆ.

Published: 24th January 2021 08:00 AM  |   Last Updated: 24th January 2021 08:00 AM   |  A+A-


congress workers support to sowmya reddy

ಸೌಮ್ಯಾ ರೆಡ್ಡಿ ಪರ ಪ್ರತಿಭಟನೆ

Posted By : Shilpa D
Source : The New Indian Express

ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ಡಿ ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಎಲ್ಲ ಮಹಿಳಾ ನಾಯಕಿಯರನ್ನು ಪೊಲೀಸರು ಎಳೆದಾಡುತ್ತಿದ್ದನ್ನು ನಾವೇ ನೋಡಿದ್ದೇವೆ. ನಾವು ಎಷ್ಟೇ ಸಹಕಾರ ಕೊಟ್ಟರೂ ವ್ಯವಸ್ಥಿತ ಸಂಚಿನಿಂದಾಗಿ ಪೊಲೀಸರು ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರಿದ್ದಾರೆ.

ಸದಾಶಿವ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೊಲೀಸರು ಹೇಡಿಗಳಂತೆ ನಡೆದುಕೊಂಡಿದ್ದಾರೆ. ಸರ್ಕಾರದ ಚಿತಾವಣೆ ಮೇಲೆ ಶಾಸಕಿ ಸೌಮ್ಯಾರೆಡ್ಡಿ ಅವರ ಮೇಲೆ ಎಫ್‌ಐಏರ್ ದಾಖಲಾಗಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಹಿಂದೆ ಬಿಜೆಪಿ
ಸರ್ಕಾರದ ಕೈವಾಡವಿದೆ. ರೈತರ ಪರವಾದ ಹೋರಾಟ ಸಂದರ್ಭದಲ್ಲಿ ಸೌಮ್ಯಾರೆಡ್ಡಿ ಸ್ವಯಂ ರಕ್ಷಣೆಗಾಗಿ ಆ ರೀತಿ ನಡೆದುಕೊಂಡಿದ್ದಾರೆ. ಯಾರ ಮೇಲೆಯೂ ಹಲ್ಲೆ ನಡೆಸಿಲ್ಲ ಎಂದಿದ್ದಾರೆ.

ಈ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವರು ಮಧ್ಯ ಪ್ರವೇಶಿಸಬೇಕು. ಸೌಮ್ಯಾರೆಡ್ಡಿ ಯಾರ ಮೇಲೂ ಹಲ್ಲೆ ಮಾಡಿಲ್ಲ. ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿ ನಾನು ಇದ್ದೇನೆ ಎಂದು ಅವರು ಹೇಳಿದರು.

ಸೌಮ್ಯಾರೆಡ್ಡಿ ಅವರ ಪರವಾಗಿ ಪಕ್ಷ ದೃಢವಾಗಿ ನಿಲ್ಲಲಿದೆ. ಸರ್ಕಾರ ಈ ಕುತಂತ್ರದ ವಿರುದ್ಧ ಹೋರಾಟ ನಡೆಸುವುದಾಗಿಯೂ ಅವರು ಹೇಳಿದರು.ರೈತರ ಪರವಾಗಿ ಕಾಂಗ್ರೆಸ್ ನಡೆಸಿದ ಹೋರಾಟವನ್ನು ನಿರುದ್ಯೋಗಿಗಳ ಹೋರಾಟ ಎಂದು ಬಿಜೆಪಿ ನಾಯಕರು ಟೀಕಿಸಿರುವುದಕ್ಕೆ ಕೆಂಡಕಾರಿದ ಅವರು, ಹೌದು ನಾವು ನಿರುದ್ಯೋಗಿಗಳು ಬಿಜೆಪಿಯವರು ಇಡೀ
ದೇಶವನ್ನೇ ನಿರುದ್ಯೋಗವನ್ನಾಗಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಆರ್ .ಆರ್ ನಗರ ಚುನಾವಣೆ ಸಮಯದಲ್ಲಿ ನನ್ನ ಮತ್ತು ಸಿದ್ದರಾಮಯ್ಯ ಅವರ ಮೇಲೆ ಯಾಕೆ ಪ್ರಕರಣ ಹಾಕಲಿಲ್ಲ. ಕೇವಲ ಆ ಹೆಣ್ಣು ಮಗಳ ಮೇಲೆ ಕೇಸ್ ಹಾಕಿದರು. ನೀವು ಬೇಕಾದರೆ ಸಂಪೂರ್ಣ ವಿಡಿಯೋ ನೋಡಿ’ ಎಂದರು. ‘ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ. ನಮ್ಮ ಬಳಿಯೂ ಸಾಕ್ಷ್ಯಗಳಿವೆ. ನಾವು ಅದನ್ನು ಮುಂದಿಡುತ್ತೇವೆ. ಆಕೆ ಕೆಳಗೆ ಬಿದ್ದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ನನಗೆ ಬೇರೆ ಯಾರ ಸಾಕ್ಷಿಯೂ ಬೇಡ. ಈ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ. ಸರ್ಕಾರ ಹೇಳದೆ ಯಾವ ಎಫ್ಐಆರ್ ಹಾಕಲು ಸಾಧ್ಯವಿಲ್ಲ. ಪೊಲೀಸರ ದಬ್ಬಾಳಿಕೆ ವೇಳೆ ಸ್ವಯಂ ರಕ್ಷಣೆ ಮಾಡಿಕೊಳ್ಳುವುದು ಆಕೆಯ ಹಕ್ಕು. ಈ ಕೇಸ್ ಬರಲಿ ನಾವು ಎದುರಿಸಲು ಸಿದ್ಧ’ ಎಂದರು. ವಿಧಾನ ಪರಿಷತ್‌ನಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಸದನ ಸಮಿತಿ ಮಧ್ಯಂತರ ವರದಿ ಸಲ್ಲಿಸಿದೆ. ಬಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದು ಮುಂದಿನ ನಡೆ ಬಗ್ಗೆ ತೀರ್ಮಾನಿಸುತ್ತೇವೆ ಎಂದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ರಾಜಭವನ ಚಲೋ ವೇಳೆ ನಡೆದ ಘಟನೆ ಸಂಬಂಧ ಶಾಸಕಿ ಸೌಮ್ಯಾ ರೆಡ್ಡಿಯವರೇ ದೂರು ನೀಡಿದ್ದಾರೆ. ಆ ದೂರು ಏನಾಯಿತು. ಸೌಮ್ಯಾ ರೆಡ್ಡಿ ಹಾಗೂ ಅವರ ವಿರುದ್ಧ ನೀಡಿರುವ ದೂರುಗಳನ್ನೂ ಸ್ವೀಕಾರ ಮಾಡಿ ತನಿಖೆ ಜರುಗಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೌಮ್ಯಾ ರೆಡ್ಡಿ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. 
 

Stay up to date on all the latest ರಾಜಕೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp