ರೈತರು-ಸರ್ಕಾರದ ನಡುವೆ ಸಂಘರ್ಷ ಪ್ರಜಾಪ್ರಭುತ್ವಕ್ಕಾದ ಅವಮಾನ: ದೇವೇಗೌಡ ವಿಷಾದ

ಗಣರಾಜ್ಯೋತ್ಸವ ಸಂಧರ್ಭದಲ್ಲಿ ರೈತ ಸಮುದಾಯ ಹಾಗೂ ಸರ್ಕಾರಕ್ಕೆ ಸಂಘರ್ಷ ಏರ್ಪಟ್ಟಿರುವುದು ಪ್ರಜಾಪ್ರಭುತ್ವಕ್ಕೆ ಆಗಿರುವ ಅವಮಾನ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ...

Published: 26th January 2021 03:47 PM  |   Last Updated: 26th January 2021 03:47 PM   |  A+A-


HDDevegowda

ಎಚ್ ಡಿ ದೇವೇಗೌಡ

Posted By : Lingaraj Badiger
Source : UNI

ಬೆಂಗಳೂರು: ಗಣರಾಜ್ಯೋತ್ಸವ ಸಂಧರ್ಭದಲ್ಲಿ ರೈತ ಸಮುದಾಯ ಹಾಗೂ ಸರ್ಕಾರಕ್ಕೆ ಸಂಘರ್ಷ ಏರ್ಪಟ್ಟಿರುವುದು ಪ್ರಜಾಪ್ರಭುತ್ವಕ್ಕೆ ಆಗಿರುವ ಅವಮಾನ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ 72ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರೈತರ ಕಾಯಿದೆ ತಿದ್ದುಪಡಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಮಾಡಿದ್ದರೂ ಇದನ್ನು ಬಗೆಹರಿಸಲು ಆಗಲಿಲ್ಲ. ಗಣರಾಜ್ಯೋತ್ಸವ ಸಮಾರಂಭ ಮುಗಿದ ಬಳಿಕ ರೈತರು ದೆಹಲಿಯಲ್ಲಿ ಟ್ರಾಕ್ಟರ್ ಜಾಥಾಕ್ಕೆ ಮುಂದಾಗಿದ್ದಾರೆ. ಸರ್ಕಾರವೇ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಕೂಡಾ ರೈತರು ಟ್ರಾಕ್ಟರ್ ಜಾಥಾಕ್ಕೆ ಮುಂದಾಗಿದ್ದಾರೆ ಎಂದರು.

ದೇಶದ ಹಲವಾರು ಸಮಸ್ಯೆಗಳನ್ನು ಒಟ್ಟಾಗಿ ಬಗೆಹರಿಸಿಕೊಳ್ಳಬೇಕು.ಆದರೆ ಅಂತ ವಾತಾವರಣ ದೇಶದಲ್ಲಿ ಇಲ್ಲ. ಪ್ರತಿಯೊಂದಕ್ಕೂ ಸಂಘರ್ಷದ ಹಾದಿ ಹಿಡಿಯುತ್ತಿದ್ದೇವೆ ಎಂದು ದೇವೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ನಾನು ಅಧಿಕಾರದಲ್ಲಿ ಇದ್ದಾಗ ಯಾವುದೇ ಸಂಘರ್ಷಕ್ಕೆ ಅವಕಾಶ ಕೊಡಲಿಲ್ಲ. ನಾನು ಸಂದೇಶ ಕೊಡುವುದಕ್ಕೆ ಯಾವುದೇ ಅಧಿಕಾರದಲ್ಲಿ ಇಲ್ಲ. ನಾನು ಸಾಮಾನ್ಯವಾಗಿ ಈ ಸಂದರ್ಭದಲ್ಲಿ ದೆಹಲಿಯಲ್ಲಿ ಇರುತ್ತಿದ್ದೆ. ಆದರೆ ಆರೋಗ್ಯದ ಸಮಸ್ಯೆ ಇರುವ ಕಾರಣದಿಂದ ಇಲ್ಲೇ ನಮ್ಮ ಕಚೇರಿಯಲ್ಲಿ ಆಚರಣೆ ಮಾಡುತ್ತಿದ್ದೇನೆ. ಸ್ವಾತಂತ್ರ್ಯ ಅಥವಾ ಗಣರಾಜ್ಯೋತ್ಸವ ದಿನಾಚರಣೆ ದಿನ ಏನೇ ಕಷ್ಟಗಳಿದ್ದರೂ ನಮ್ಮ ಕಚೇರಿಯಲ್ಲಿ ಆಚರಣೆ ನಡೆಯುತ್ತದೆ ಎಂದರು.


Stay up to date on all the latest ರಾಜಕೀಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp