ಡಿಕೆ ಶಿವಕುಮಾರ್ ಕರೆದ ಕೂಡಲೆ ಯಾರೂ ಹೋಗಲ್ಲ; ಆದರೂ ಅವರ ಸೌಜನ್ಯ ಮೆಚ್ಚುತ್ತೇನೆ: ಎಚ್.ವಿಶ್ವನಾಥ್

ಡಿ.ಕೆ.ಶಿವಕುಮಾರ್‌ ಒಬ್ಬ ಸಂಘಟನಾ ಚತುರ. ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕು ಎಂಬುದನ್ನು ಅವರು ಕರಗತ ಮಾಡಿಕೊಂಡಿದ್ದಾರೆ’ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್

ಮೈಸೂರು: ಡಿ.ಕೆ.ಶಿವಕುಮಾರ್‌ ಒಬ್ಬ ಸಂಘಟನಾ ಚತುರ. ಪಕ್ಷವನ್ನು ಯಾವ ರೀತಿ ಸಂಘಟನೆ ಮಾಡಬೇಕು ಎಂಬುದನ್ನು ಅವರು ಕರಗತ ಮಾಡಿಕೊಂಡಿದ್ದಾರೆ’ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿರುವ 17 ಶಾಸಕರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಅವರು ಪಕ್ಷಕ್ಕೆ ಕರೆದ ಕೂಡಲೇ ಯಾರೂ ಹೋಗಲ್ಲ. ಆದರೂ ಅವರ ಸೌಜನ್ಯತೆಯನ್ನು ಮೆಚ್ಚುತ್ತೇನೆ. ಅವರೊಬ್ಬ ಸಂಘಟನಾ ಚತುರ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ರಾಜಕೀಯ ಚಲನಲವನ, ಪರಿಸ್ಥಿತಿಗಳನ್ನು ಅವರು ಅರ್ಥಮಾಡಿಕೊಂಡಿದ್ದಾರೆ’ ಎಂದು ಹೇಳಿದರು. ‘ಬಿಜೆಪಿ ಸೇರಿದ ಕಾಂಗ್ರೆಸ್‌ನ ಶಾಸಕರನ್ನು ಪ್ರಳಯ ಆದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜಕಾರಣದಲ್ಲಿ ಅಂತಹ ಮಾತು ನಡೆಯದು. ರಾಜಕೀಯ ಪಕ್ಷಗಳ ನಡವಳಿಕೆ ಆಯಾ ಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ ಎಂಬುದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು’ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com