ಸಿಎಂ ಯಡಿಯೂರಪ್ಪ ಭೇಟಿಯಾದ ಹೆಚ್‌ಡಿಕೆ; ಕುತೂಹಲ ಕೆರಳಿಸಿದ ಮಾತುಕತೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿಯು ಕುತೂಹಲ ಕೆರಳಿಸಿದೆ. 
ಸಿಎಂ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ
ಸಿಎಂ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ಕುತೂಹಲ ಮೂಡಿಸಿದೆ. 

ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿಯ ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಮಂಡ್ಯ ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮಂಡ್ಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಸೋಮವಾರ ಮನವಿ ಸಲ್ಲಿಸಿತು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಮೈಶುಗರ್ ಖಾರ್ಖಾನೆಯ ಸ್ಥಿತಿಗತಿ ಅದನ್ನು ಖಾಸಗಿಯವರಿಗೆ ವಹಿಸುವುದರಿಂದ ರೈತರಿಗೆ ಅನ್ಯಾಯವಾಗುತ್ತದೆ.ಮಂಡ್ಯದ ರೈತರು ಇದನ್ನು ನಂಬಿ ಬದುಕು ನಡೆಸುತ್ತಿದ್ದಾರೆ.ಹೀಗಾಗಿ ರೈತರಿಗೆ ಅನ್ಯಾಯವಾಗುವಂತಹ ಖಾಸಗೀಕರಣದ ನಿರ್ಧಾರ ಸರಿಯಲ್ಲ ಎಂದು ಸಿಎಂ ಜೊತೆ ಚರ್ಚಿಸಿದರು.

ಭೇಟಿ ಬಳಿಕ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಶುಗರ್ ಕಾರ್ಖಾನೆ ಖಾಸಗಿ ಪಾಲಾಗಲು ಅವಕಾಶ ಕೊಡದಂತೆ ಮನವಿ ಮಾಡಿದ್ದೇವೆ. ಖಾಸಗಿಯವರಿಗೆ ವಹಿಸುವ ಬದಲು ಸರ್ಕಾರದ ಸ್ವಾಮ್ಯದಲ್ಲೇ ಇರಬೇಕು ಎಂದು ಸಿಎಂಗೆ ಭೇಟಿ ಮಾಡಿ ಮನವಿ ಮಾಡಿದ್ದು, ಸಿಎಂ ಖಾಸಗಿಯವರಿಗೆ ನೀಡಲು ಒಪ್ಪಿಗೆ ಕೊಡುವುದಿಲ್ಲ ಭರವಸೆ ಕೊಟ್ಟಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರು ತಾ.ಪಂ. ಜಿ.ಪಂ. ಮೀಸಲಾತಿ ಬಗ್ಗೆ ಮೇಲ್ಮನೆ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್.ಡಿ.ಕುಮಾರಸ್ವಾಮಿ, ಯೋಗೇಶ್ವರ್ ಬಾಲಿಶ ಹೇಳಿಕೆ ಕೊಡುವುದು ಎಷ್ಟು ಸರಿ ಎಂದು ಯೋಚನೆ ಮಾಡಲಿ.ಮೀಸಲಾತಿ ನಿಗದಿ ಮಾಡೋದು ಚುನಾವಣಾ ಆಯೋಗ, ಸರ್ಕಾರವಲ್ಲ ಎಂದರು.

ಮೇಕೆದಾಟು ಯೋಜನೆಯಲ್ಲಿ ತಮಿಳುನಾಡಿಗೆ ಅನ್ಯಾಯ ಮಾಡುವ ಯೋಚನೆ ನಮಗೆ ಇಲ್ಲ.ನಾವು ತಮಿಳು ನಾಡಿಗೆ ನೀಡುವ ನೀರು ನಿಲ್ಲಿಸುವುದಿಲ್ಲ. ಟ್ರಿಬ್ಯುನಲ್ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ. ನ್ಯಾಯಾಧಿಕರಣದ ತೀರ್ಪು ನಾವು ಉಲ್ಲಂಘಿಸುವುದಿಲ್ಲ.ನಾವು ಸಹೋದರರಂತೆ ಇರಬೇಕಾಗಿದೆ. ಅದಕ್ಕೆ ನಿಮ್ಮ ಸಹಕಾರವೂ ಬೇಕಿದೆ .ತಮಿಳುನಾಡು ಹೊಗೇನಕಲ್ ನಲ್ಲಿ ಯಾರ ಅಪ್ಪಣೆ ತೆಗೆದುಕೊಂಡು ಜಲಾಶಯ ಕಟ್ಟಿದರು?ಎಂದು ಪ್ರಶ್ನಿಸಿದ ಹೆಚ್.ಡಿಕೆ, ನಮ್ಮ ನಾಡಿನಲ್ಲಿ ನಾವು ಜಲಾಶಯ ನಿರ್ಮಿಸಲು ಅವರು ಅಡ್ಡಿ ಪಡಿಸುವುದು ಸರಿಯಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಭೇಟಿ ವೇಳೆ ಹೆಚ್.ಡಿಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ರಾಜಕೀಯ ಸಂಬಂಧಿತ ಕೆಲ ಚರ್ಚೆಗಳು, ಆಂತರಿಕ ಕಲಹ ವಿಚಾರವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆಯಾದರೂ ಇದೊಂದು ಅಪೌಚಾರಿಕ ಭೇಟಿ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com