ಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್
ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.
Published: 05th July 2021 07:30 AM | Last Updated: 05th July 2021 01:15 PM | A+A A-

ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿರುವ ಸಿಪಿ ಯೋಗೇಶ್ವರ್
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.
ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಎಂಬುದು ದಸರಾ ಅಂಬಾರಿ ಹೊರುವ ಆನೆ ಇದ್ದಂತೆ. ಅದು ಶಾಶ್ವತವಲ್ಲ. ಅದು ವೈಭವ, ಪ್ರತಿಷ್ಠೆಯಲ್ಲ. ಅದು ಜನಪರ ಕಾಳಜಿ ಇರುವ ಸಂವೇದನಾಶೀಲವಾದ ಹುದ್ದೆ. ಇನ್ನೇನು ದಸರಾ ಸಮೀಪಿಸುತ್ತಿರುವುದರಿಂದ ಅಷ್ಟರಲ್ಲಿ ಹೈಕಮಾಂಡ್'ಗೆ ಅಂಬಾರಿ ಹೊರುವ ಆನೆ ಸಿಗಲಿದೆ ಎಂದು ಹೇಳಿದ್ದಾರೆ.
ಆನೆ ತೂಕ ಮುಖ್ಯವಲ್ಲ. ಕೊನೆವರೆಗೂ ಅಂಬಾರಿಯನ್ನು ಯಶಸ್ವಿಯಾಗಿ ತಲುಪಿಸುವ ಆನೆಯಾಗಬೇಕು. ಸಿಎಂ ಸ್ಥಾನ ಸಾಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಬೇಕು ಅಂತ ಇದ್ದಾರೆ. ಅಂಬಾರಿ ಹೊರುವ ಆನೆಯನ್ನು ಆಗಾಗ ಬದಲಾಯಿಸಲಾಗುತ್ತದೆ. ಬದಲಾವಣೆ ಜಗದ ನಿಯಮ. ಅರ್ಜುನ, ಅಭಿಮನ್ಯು, ಬಲರಾಮ ಎಲ್ಲರೂ ಅಂಬಾರಿ ಹೊತ್ತಿದ್ದಾರೆ. ಅರ್ಜಿನ ಅಂಬಾರಿ ಹೊತ್ತ ಅಂತಾ ಮರಿ ಆನೆಗೆ ಅಂಬಾರಿ ಹೊರಿಸಲು ಸಾಧ್ಯವಿಲ್ಲ. ಕರ್ನಾಟಕ ಆನೆ ಮತ್ತು ಹುಲಿಗಳಿಗೆ ಹೆಚ್ಚು ಹೆಸರುವಾಸಿ ಎಂದು ತಿಳಿಸಿದ್ದಾರೆ.