ಗೊಂದಲಕ್ಕೆ ತೆರೆ: 2022 ರ ಜನವರಿಯಲ್ಲಿ ಮೊಹಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

ಫೆಬ್ರುವರಿಯಲ್ಲಿ ನಡೆದಿದ್ದ ಯುವ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಜನವರಿ 31ರಂದು ಯುವ ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ.
ಮೊಹಮದ್ ನಲಪಾಡ್
ಮೊಹಮದ್ ನಲಪಾಡ್

ಬೆಂಗಳೂರು: ಮಾಜಿ ಸಚಿವ ಎಂ.ಆರ್‌. ಸೀತಾರಾಮ್‌ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ 2022ರ ಜನವರಿ 31ರವರೆಗೆ ಯುವ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿ ಸೋಮವಾರ ಆದೇಶ ಹೊರಡಿಸಿರುವ ಪಕ್ಷದ ರಾಷ್ಟ್ರೀಯ ಯುವ ಘಟಕ, ಈ ಸಂಬಂಧ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.

ಫೆಬ್ರುವರಿಯಲ್ಲಿ ನಡೆದಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸಿರುವ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ಜನವರಿ 31ರಂದು ಅಧ್ಯಕ್ಷ ಸ್ಥಾನ ಪಡೆಯಲಿದ್ದಾರೆ.

ಹಲ್ಲೆಯಂತಹ ಗಂಭೀರ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಮೊಹಮ್ಮದ್‌ ನಲಪಾಡ್‌ಗೆ ಚುನಾವಣೆಯಲ್ಲಿ ಅಧಿಕ ಮತ ಲಭಿಸಿದ್ದರೂ ಅಧ್ಯಕ್ಷ ಸ್ಥಾನ ದೊರೆತಿರಲಿಲ್ಲ. ಮತ ಗಳಿಕೆಯಲ್ಲಿ 2ನೇ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯ ಅವರಿಗೇ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಿಂದಾಗಿ ಕಾಂಗ್ರೆಸ್ ನ ಬಣ ರಾಜಕೀಯ ಬಯಲಿಗೆ ಬಂದಿತ್ತು. 57,271 ಮತಗಳನ್ನು ಪಡೆದ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರನ್ನು ಚುನಾವಣಾ ಮಂಡಳಿಯು ಅಧ್ಯಕ್ಷರನ್ನಾಗಿ ಘೋಷಿಸಿತು ಮತ್ತು 64,203 ಮತಗಳನ್ನು ಪಡೆದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಲಾಯಿತು.

ಈ ಗೊಂದಲಕ್ಕೆ ತೆರೆ ಎಳೆಯಲು ಒಂದು ಮಾರ್ಗವನ್ನು ಕಂಡುಕೊಳ್ಳಲು ಇತ್ತೀಚೆಗೆ ಪಕ್ಷದ ಮುಖಂಡರಾದ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಶ್ರೀನಿವಾಸ್ ಅವರನ್ನು ಭೇಟಿಯಾಗಿದ್ದರು. ನಂತರ ನಲಪಾಡ್ ಅವರನ್ನು ಪಿವೈಸಿ ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com