ಜೆಡಿಎಸ್ ಜೊತೆಗೆ ಬಿಜೆಪಿ ಒಳ ಒಪ್ಪಂದ ಆರೋಪ ಸರಿಯಲ್ಲ: ಡಿಸಿಎಂ ಅಶ್ವತ್ಥ ನಾರಾಯಣ
ಸ್ಥಳೀಯ ಸಂಸ್ಥೆ ಚುನಾವಣೆ ಸೇರಿ ಯಾವುದೇ ವಿಷಯಗಳಲ್ಲೂ ಬಿಜೆಪಿ- ಜೆಡಿಎಸ್ ನಡುವೆ ಒಳ ಒಪ್ಪಂದ ಆಗಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಮಾತುಗಳು ಆಧಾರ ರಹಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
Published: 07th July 2021 08:35 PM | Last Updated: 07th July 2021 09:52 PM | A+A A-

ಡಾ.ಸಿ.ಎನ್. ಅಶ್ವತ್ಥ ನಾರಾಯಣ
ರಾಮನಗರ: ಸ್ಥಳೀಯ ಸಂಸ್ಥೆ ಚುನಾವಣೆ ಸೇರಿ ಯಾವುದೇ ವಿಷಯಗಳಲ್ಲೂ ಬಿಜೆಪಿ- ಜೆಡಿಎಸ್ ನಡುವೆ ಒಳ ಒಪ್ಪಂದ ಆಗಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಮಾತುಗಳು ಆಧಾರ ರಹಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ರಾಮನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತಿಪಕ್ಷಗಳಿಗೆ, ಮುಖ್ಯವಾಗಿ ಕಾಂಗ್ರೆಸ್ಗೆ ಒಳ್ಳೆಯದು ಮಾತಾಡಿ ಅಭ್ಯಾಸವಿಲ್ಲ. ಮಂಡ್ಯ, ಮೈಸೂರು, ರಾಮನಗರ ಸೇರಿ ಯಾವುದೇ ಭಾಗದಲ್ಲಿ ಬಿಜೆಪಿ- ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ ಎಂದರು.
ಎಲ್ಲರಿಗೂ ಗೊತ್ತಿರುವಂತೆ ಜೆಡಿಎಸ್ ನಮಗೆ ವಿರೋಧ ಪಕ್ಷ. ಹಾಗೆ ನೋಡಿದರೆ ಒಳಒಪ್ಪಂದಗಳು ಇರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮಾತ್ರ. ಈ ಬಗ್ಗೆ ದೂರುವವರು ಅವೆರಡೂ ಪಕ್ಷಗಳ ಬಗ್ಗೆ ಮಾತನಾಡಬೇಕು ಎಂದು ಡಿಸಿಎಂ ಹೇಳಿದರು.