
ಬೆಂಗಳೂರಲ್ಲಿ ಕಾಂಗ್ರೆಸ್ ಸೈಕಲ್ ರ್ಯಾಲಿ
ಬೆಂಗಳೂರು: ಇಂಧನ ಬೆಲೆ ಏರಿಕೆಯಾಗುತ್ತಿದ್ದಂತೆ, ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಪ್ರತಿಭಟನೆಯ ಸಂಕೇತವಾಗಿ ರಾಜ್ಯಾದ್ಯಂತ ಸೈಕಲ್ ರ್ಯಾಲಿ ನಡೆಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಮತ್ತು ಸಲೀಮ್ ಅಹ್ಮದ್, ಹಿರಿಯ ಮುಖಂಡರಾದ ಆರ್.ವಿ. ದೇಶಪಾಂಡೆ, ಬಿ.ಕೆ. ಹರಿಪ್ರಸಾದ್ ಮತ್ತಿತರರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಇಂಧನ ಬೆಲೆಗಗನಕ್ಕೇರುತ್ತಿರುವಾಗ, ಇಂಧನ, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ನೀಡಲು ಕೇಂದ್ರವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿದಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 60% ವರೆಗೆ ಭಾರಿ ತೆರಿಗೆ ವಿಧಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.
ಏತನ್ಮಧ್ಯೆ, ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ಜನರಿಗೆ ಪರಿಹಾರ ಒದಗಿಸಲು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಉಡುಪಿಯಲ್ಲಿದ್ದ ಶಿವಕುಮಾರ್ ಅದೇ ಕೂಡ ಅದೇ ಮಾತನ್ನಾಡಿದ್ದಾರೆ. ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸಲಿಕ್ಕಾಗಿ ಜನರಿಗೆ ಪರಿಹಾರವನ್ನು ನೀಡಲು ವಿಫಲವಾದ ಕಾರಣ ಶಿವಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.