ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೀಸಲಾತಿ: ಈಶ್ವರಪ್ಪ ಅಸಮಾಧಾನ

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈಶ್ವರಪ್ಪ
ಈಶ್ವರಪ್ಪ

ಕಲಬುರಗಿ: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಇದೊಂದು ಆತುರದ ನಿರ್ಧಾರವಾಗಿದೆ. ಜನ ಪ್ರತಿನಿಧಿಯಾಗಿ ಇದು ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ ವರೆಗೆ ಚುನಾವಣೆಯನ್ನು ಮುಂದೂಡಬೇಕೆಂದು ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು, ಆದರೆ ಇದ್ದಕ್ಕಿದ್ದಂತೆ,  ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಮೀಸಲಾತಿ ವಿಭಾಗಗಳನ್ನು ಘೋಷಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಿದ ಈಶ್ವರಪ್ಪ ಸರ್ಕಾರ ಆಯೋಗದ ಜೊತೆ ಸಹಕಾರದಿಂದ ವರ್ತಿಸುವುದು ಎಂದು ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧವಾಗಿದೆ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಸದಾನಂದಗೌಡ ರಾಜಿನಾಮೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಗೌಡರು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ನಿಜವಾದ ಕಾರ್ಯಕರ್ತರು ಅಧಿಕಾರ ಕೇಳುವುದಿಲ್ಲ, ಅವರು ಪಾರ್ಟಿಗೆ ವಿಧೇಯರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com