ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಏಕೈಕ ಒಕ್ಕಲಿಗ ಮಹಿಳೆ ಶೋಭಾ ಕರಂದ್ಲಾಜೆ!

ಡಿವಿ ಸದಾನಂದಗೌಡರ ನಂತರ ಮತ್ತೊಬ್ಬ ಒಕ್ಕಲಿಗ ಪ್ರಭಾವಿ ನಾಯಕಿ ಶೋಭ ಕರಂದ್ಲಾಜೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ.
ಶೋಭಾ ಕರಂದ್ಲಾಜೆ ಮತ್ತು ನರೇಂದ್ರ ಮೋದಿ
ಶೋಭಾ ಕರಂದ್ಲಾಜೆ ಮತ್ತು ನರೇಂದ್ರ ಮೋದಿ

ಮಂಗಳೂರು: ಏಳು ವರ್ಷಗಳ ನಂತರ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸಚಿವ ಸ್ಥಾನ ಅಲಂಕರಿಸಿದ್ದಾರೆ. 

ಡಿವಿ ಸದಾನಂದಗೌಡರ ನಂತರ ಮತ್ತೊಬ್ಬ ಒಕ್ಕಲಿಗ ಪ್ರಭಾವಿ ನಾಯಕಿ ಶೋಭ ಕರಂದ್ಲಾಜೆ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ.  ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಮತ್ತು ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸ್ಪರ್ಧೆ ನೀಡುವ ಮತ್ತೊಬ್ಬ ಒಕ್ಕಲಿಗ ನಾಯಕಿಯಾಗಲಿದ್ದಾರೆ.

2008 ರಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ ನಂತರ ಬಿಎಸ್ ಯಡಿಯೂರಪ್ಪ ನೇತೃತ್ವದ ಮೊಟ್ಟ ಮೊದಲ ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆ ಪಡೆದು ಸಚಿವೆಯಾಗಿದ್ದರು.

ಆದರೆ ಯಡಿಯೂರಪ್ಪ ಅವರೊಂದಿಗೆ 2014 ರಲ್ಲಿ ಕೆಜೆಪಿಯಿಂದ ಬಿಜೆಪಿಗೆ ಮರಳಿದ ಶೋಭಾ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ನಂತರ, ಅವರು ರಾಜ್ಯ ರಾಜಕಾರಣದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯಲಿಲ್ಲ ಮತ್ತು ಹೆಚ್ಚಾಗಿ ಉಡುಪಿ-ಚಿಕ್ಕಮಗಳೂರಿಗೆ ಸೀಮಿತರಾಗಿದ್ದರು.

ಕಳೆದ ವಿಧಾನಸಭೆ ಚುನಾವಣೆ ವೇಳೆ ಅವರು  ರಾಜ್ಯ ರಾಜಕಾರಣಕ್ಕೆ ಮರಳಲು ಪ್ರಯತ್ನಿಸಿದ್ದರು, ಆದರೆ ಅವರ ವಿರೋಧಿಗಳು ಶೋಭಾ ಮರಳದಂತೆ ಯಡಿಯೂರಪ್ಪ ಮೇಲೆ ಒತ್ತಡ ಹೇರಿದ್ದರು.

2019 ರಲ್ಲಿ ಪಕ್ಷದೊಳಗಿನ ಕೆಲವರು ಶೋಭಾ ಮತ್ತೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವುದನ್ನು ವಿರೋಧಿಸಿ ಟಿಕೆಟ್ ತಪ್ಪಿಸಲು ಯತ್ನಿಸಿದರು, ಆದರೆ ಅವರ ಪ್ರಯತ್ನ ಸಫಲವಾಗಲಿಲ್ಲ.  ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಶೋಭಾ ಅವರನ್ನು ತುಳಿಯಲು ಅನೇಕ ಪ್ರಯತ್ನಗಳು ನಡೆದವು.

ಶೋಭಾ ಕರಂದ್ಲಾಜೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು, ಕರಾವಳಿ, ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ಪ್ರಭಾವಿ ಒಕ್ಕಲಿಗ ನಾಯಕಿಯಾಗಿ ಹಿಡಿತವನ್ನು ಮರಳಿ ಪಡೆಯುವ ಸಾಧ್ಯತೆಯಿದೆ.

ಮೈಸೂರಿನ ಜನರು ಜಿಲ್ಲಾ ಸಚಿವರಾಗಿ ಅವರು ಮಾಡಿದ ಸಾಧನೆಗಳನ್ನು ಇಂದಿಗೂ ನೆನಪಿಸಿಕೊಳ್ಳುತ್ತಾರೆ. ಈ ಪ್ರದೇಶಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದಾರೆ ದಕ್ಷಿಣ ಕನ್ನಡ ಬಿಜೆಪಿ ಮುಖ್ಯಸ್ಥ ಎಂ.ಸುದರ್ಶನ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com