ದ್ರೋಹ ಮಾಡಿದವರ ಕ್ಷಮಿಸಲಾಗದು, ಮರಳಿ ಪಕ್ಷಕ್ಕೆ ಅಂತಹವರ ಸೇರ್ಪಡೆ ಸಾಧ್ಯವಿಲ್ಲ: ಸಿದ್ದರಾಮಯ್ಯ

ಪದೇ ಪದೇ ದ್ರೋಹ ಮಾಡುವವರನ್ನು ಕ್ಷಮಿಸಲು ಸಾಧ್ಯವಿಲ್ಲ. ಅಂತಹವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಪದೇ ಪದೇ ದ್ರೋಹ ಮಾಡುವವರನ್ನು ಕ್ಷಮಿಸಲು ಸಾಧ್ಯವಿಲ್ಲ. ಅಂತಹವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಪ್ರದೇಶ ಕಾಂಗ್ರೆಸ್ ಸಮಿತಿಯು ನಗರ ಹಾಗೂ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಹಾಯ ಹಸ್ತ ಹಾಗೂ ಸೈಕಲ್ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಎಂದರೆ ಒಂದು ಚಳವಳಿ, ಬಡವರ ಪಕ್ಷ. ನಾವು ನೊಂದವರ ಪರ. ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ. ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀಸಿದಿ ಸರ್ಕಾರ ರಚಿಸಿ ಆಡಳಿತ ನಡೆಸುತ್ತಿದ್ದಾರೆ. ಕೊರೋನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ಬರುವ ಮಾಹಿತಿ ಇದೆ. ಒಂದು ಎರಡನೇ ಅಲೆಯಲ್ಲಿ ನಮಗೇನೂ ಆಗಿಲ್ಲ ಎಂದು ಜನ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡಬಾರದು. ಇದು ದೊಡ್ಡ ಸಾಂಕ್ರಾಮಿಕ ರೋಗ. ಅದರಿಂದ ದೂರ ಇರಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com