ಹೆಚ್ ಡಿಕೆ - ಸುಮಲತಾ ಜಟಾಪಟಿ ಸಾಕು; ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ: ಸಿಎಂ

ಮಂಡ್ಯ ಜಿಲ್ಲೆ ರಾಜಕಾರಣ ಮತ್ತು ಅಕ್ರಮ ಗಣಿಗಾರಿಕೆ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರುಗಳು ಪರಸ್ಪರ ಕಚ್ಚಾಡುವುದನ್ನು ಕೈಬಿಟ್ಟು ಸಹೋದರರಂತೆ ಬಾಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಕಲಬುರಗಿ: ಮಂಡ್ಯ ಜಿಲ್ಲೆ ರಾಜಕಾರಣ ಮತ್ತು ಅಕ್ರಮ ಗಣಿಗಾರಿಕೆ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರುಗಳು ಪರಸ್ಪರ ಕಚ್ಚಾಡುವುದನ್ನು ಕೈಬಿಟ್ಟು ಸಹೋದರರಂತೆ ಬಾಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಮತ್ತು ಮಾಧ್ಯಮಗಳ ಮುಂದೆ ಮಾತನಾಡುವುದರಿಂದ, ವಿಷಯ ಪ್ರಸ್ತಾಪ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ , ಜನಪ್ರತಿನಿಧಿಗಳ ವರ್ತನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಜಿಗುಪ್ಸೆ , ಬೇಸರ, ಅಸಮಾಧಾನ ಮೂಡಲಿದೆ ಇದಕ್ಕೆ ಯಾರೊಬ್ಬರು ಅವಕಾಶ ಕೊಡಬಾರದು ಎಂದರು.

ಈ ವಿವಾದ ಇಲ್ಲಿಗೆ ನಿಲ್ಲಿಸಬೇಕು. ಎಲ್ಲರೂ ಒಟ್ಟಾಗಿ ರಾಜ್ಯದ ಅಭಿವೃದ್ಧಿ ಕೆಲಸ ಮಾಡಬೇಕು. ಇನ್ನು ಅಂಬರೀಶ್ ಸ್ಮಾರಕ ನಿರ್ಮಾಣದಲ್ಲಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಅದರ ಬಗ್ಗೆ ನನಗೆ ಸಮಾಧಾನ, ತೃಪ್ತಿ ಇದೆ ಸಿಎಂ ಯಡಿಯೂರಪ್ಪ ಹೇಳಿದರು.

ಕಲಬುರಗಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಚಾಲನೆಗಾಗಿ ಬಂದಿದ್ದು ಪ್ರವಾಹದ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೀಚಿಸಲಾಗಿದೆ ಎಂದರು. ಇನ್ನು ಕೊರೋನಾ ಹೆಚ್ಚಾಗಿರುವ ಕಾರಣ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸುವ ನುರ್ಧಾರ ಸಧ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com