ಮಂಡ್ಯದಲ್ಲಿ ಪುತ್ರನನ್ನ ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ: ಸಿದ್ದರಾಮಯ್ಯ 

ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್​ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅರೋಪಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಹುಬ್ಬಳ್ಳಿ: ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿಯನ್ನ ಸುಮಲತಾ ಅಂಬರೀಷ್​ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅರೋಪಿಸಿದ್ದಾರೆ.

ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಸುಮಲತಾ ಆರೋಪ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಲತಾ ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲಿಸಬೇಕಿತ್ತು ಎಂದಿದ್ದಾರೆ.

ಕೆಆರ್​ಎಸ್ ಡ್ಯಾಂನ 20 ಕೀಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ‌. ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com