2023 ವಿಧಾನಸಭೆಯಲ್ಲಿ 150 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ: ಮುಂದಿನ ವರ್ಷ ಜನವರಿಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Published: 16th July 2021 11:56 AM | Last Updated: 16th July 2021 12:24 PM | A+A A-

ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಚುನಾವಣೆಗೆ ಒಂದು ವರ್ಷಕ್ಕೂ ಮೊದಲೇ ಅಂದರೆ, ಜನವರಿ 15ರೊಳಗೆ ಕನಿಷ್ಠ 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಮತ್ತು 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮತ್ತು ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಮುಖಂಡರ ಜೊತೆ ಗುರುವಾರ ಅವರು ಚರ್ಚೆ ನಡೆಸಿದರು.
ಮುಂದಿನ ಬುಧವಾರದವರೆಗೆ ಪಕ್ಷದ ಜಿಲ್ಲಾಮಟ್ಟದ ನಾಯಕರ ಜೊತೆ ಚರ್ಚಿಸುತ್ತೇನೆ. ಪದಾಧಿಕಾರಿಗಳ ನೇಮಕದ ಬಗ್ಗೆಯೂ ನಿರ್ಣಯ ತೆಗೆದುಕೊಳ್ಳಲಾಗುವುದು’ ಎಂದರು.
2022ರ ಜನವರಿ ಎಂದರೆ ಚುನಾವಣೆಗೆ ಸುಮಾರು ಒಂದು ವರ್ಷ ಉಳಿದಿರುತ್ತದೆ. 150 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರೆ ಅವರು ಚುನಾವಣೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಅನುಕೂಲವಾಗಲಿದೆ" ಎಂದು ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್ ತೊರೆದು, ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವು ಕೊಟ್ಟ ಜಿ.ಟಿ. ದೇವೇಗೌಡ "ಪಕ್ಷ ಸಂಘಟನೆ, ಪದಾಧಿಕಾರಿಗಳ ನೇಮಕ, ನಾಯಕರ ಭೇಟಿಗಾಗಿ ಮುಂದಿನ ಒಂದು ವಾರದಲ್ಲಿ ಪ್ರತಿದಿನ 5 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇನೆ" ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.