ನಾಳೆ ದೆಹಲಿಗೆ ಸಿಎಂ ಯಡಿಯೂರಪ್ಪ: ಪ್ರಧಾನಿ ಮೋದಿ ಸೇರಿದಂತೆ ಸಚಿವರ ಭೇಟಿ ಸಾಧ್ಯತೆ, ಕುತೂಹಲ ಮೂಡಿಸಿದ ಬಿಎಸ್'ವೈ ನಡೆ

ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆಂಬುದು ಎಲ್ಲರಲ್ಲಿಯೂ ಕುತೂಹಲ ಕೆರಳಿಸಿದೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆಂಬುದು ಎಲ್ಲರಲ್ಲಿಯೂ ಕುತೂಹಲ ಕೆರಳಿಸಿದೆ. 

ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಐದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಸಂವಾದ ನಡೆಸುತ್ತಿದ್ದು, ಈ ವಿಡಿಯೋ ಸಂವಾದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆ. 

ಈ ನಡುವೆ ಯಡಿಯೂರಪ್ಪ ಅವರು ಶುಕ್ರವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆಂಬ ಊಹಾಪೋಹಗಳು ಶುರುವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಮಾಹಿತಿ ನೀಡಿ ಪ್ರಧಾನಮಂತ್ರಿ ಭೇಟಿಗಾಗಿ ಅನುಮತಿ ಕೋರಲಾಗಿದೆ ಎಂದು ತಿಳಿಸಿವೆ. 

ಶನಿವಾರ ಯಡಿಯೂರಪ್ಪ ಅವರು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದ್ದು. ಭೇಟಿ ವೇಳೆ ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಶಾಸಕ ಮುನಿರತ್ನ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಪ್ರಧಾನಮಂತ್ರಿಗಳೊಂದಿಗೆ  ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಜೊತೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿ 2 ವರ್ಷಗಳಾಗುತ್ತಿರುವ ಕುರಿತಂತೆಯೂ ಮಾಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ಪ್ರಧಾನಮಂತ್ರಿಗಳ ಭೇಟಿ ಜೊತೆಗೆ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಲಿದ್ದಾರೆ. ಭಾನುವಾರ ಮರಳಿ ಬೆಂಗಳೂರಿಗೆ ಯಡಿಯೂರಪ್ಪ ಅವರು ವಾಪಸ್ಸಾಗಲಿದ್ದಾರೆಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com