ಅನೇಕ ಶಾಸಕರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿದ್ದಾರೆ: ಡಿಕೆ ಶಿವಕುಮಾರ್

ಕಾಂಗ್ರೆಸ್ ಸೇರಲು ಅನೇಕ ಶಾಸಕರು ಮತ್ತು ಇತರ ರಾಜಕೀಯ ಪಕ್ಷಗಳ ಕಾರ್ಯಕರ್ತರು ಆಸಕ್ತಿ ತೋರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಕಲಬುರಗಿ: ಕಾಂಗ್ರೆಸ್ ಸೇರಲು ಅನೇಕ ಶಾಸಕರು ಮತ್ತು ಇತರ ರಾಜಕೀಯ ಪಕ್ಷಗಳ ಕಾರ್ಯಕರ್ತರು ಆಸಕ್ತಿ ತೋರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿಗೆ ತೆರಳುವ ಮೊದಲು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮತ್ತು ಮಾಜಿ ಸಚಿವ ಎಂ.ಬಿ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಆಸಕ್ತಿ ತೋರಿಸಿದ ಶಾಸಕರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿಯಾಗಲು ಮ್ಯೂಸಿಕಲ್ ಚೇರ್ ಆಟ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಮ್ಯೂಸಿಕಲ್ ಚೇರ್ ಆಟ ಆಡುತ್ತಿರುವವರು ಯಾರೂ ಎಂದು ಎಲ್ಲರೂ ತಿಳಿದಿದ್ದಾರೆ. ಯಡಿಯೂರಪ್ಪನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಅನೇಕ ಬಿಜೆಪಿ ಶಾಸಕರು ದೆಹಲಿಗೆ ಹೋಗಿ ಬರುತ್ತಿದ್ದಾರೆ. ಇನ್ನು ಯಡಿಯೂರಪ್ಪನವರ ಬೆಂಬಲಿಗರು ಬಿಎಸ್ವೈ ತಲೆದಂಡಕ್ಕೆ ಒತ್ತಾಯಿಸುವವರ ಮೇಲೆ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ.

ಚುನಾವಣೆ ಇನ್ನು ದೂರವಿದೆ. ಕೊರೋನಾ ಆತಂಕದಿಂದಾಗಿ ನಾವು ಸಾರ್ವಜನಿಕ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರೊಂದಿಗೆ ಸಂಪರ್ಕದಲ್ಲಿರುವುದು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವುದು ರಾಜಕೀಯ ಪಕ್ಷಗಳ ಕರ್ತವ್ಯವಾಗಿದೆ. ಕಾಂಗ್ರೆಸ್ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುತ್ತಿದ್ದಾರೆ ಎಂದರು.

ವಿಮಾನ ನಿಲ್ದಾಣಕ್ಕೆ ಶಿವಕುಮಾರ್ ಆಗಮಿಸುತ್ತಿದ್ದಂತೆ ಕಾರ್ಯಕರ್ತರು 'ಮುಂದಿನ ಸಿಎಂ ಶಿವಕುಮಾರ್' ಎಂಬ ಘೋಷಣೆಗಳೊಂದಿಗೆ ಸ್ವಾಗತಿಸಿದರು. ರಿಂಗ್ ರೋಡ್ ಬಳಿ ಕ್ರೇನ್ ಬಳಸಿ ಶಿವಕುಮಾರ್ ಅವರಿಗೆ ದೊಡ್ಡ ಗಾತ್ರದ ಹೂಮಾಲೆ ಹಾಕಲಾಯಿತು. ನಗರದ ಗಡಿ ತನಕ 40ಕ್ಕೂ ಹೆಚ್ಚು ಕಾರುಗಳು ಶಿವಕುಮಾರ್ ಅವರ ಕಾರನ್ನು ಹಿಂಬಾಲಿಸಿದವು.

ಒಂದೆಡೆ ಶಿವಕುಮಾರ್ ಅವರಿಗೆ ಭರ್ಜರಿ ಸ್ವಾಗತ ಸಿಕ್ಕರೆ, ಮತ್ತೊಂದೆಡೆ ಶಿವಕುಮಾರ್ ಅವರ ಕಾರು ಆರ್‌ಟಿಒ ಕ್ರಾಸ್ ಮೂಲಕ ಹಾದುಹೋಗುವಾಗ ಮಡಿಗಾ ಸಮುದಾಯಕ್ಕೆ ಸೇರಿದ ಜನರು 'ಡೌನ್ ಡೌನ್ ಘೋಷಣೆಗಳನ್ನು' ಕೂಗಿದರು. ನ್ಯಾಯಮೂರ್ತಿ ಸದಾಶಿವ ಆಯೋಗಗಳ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದರ ವಿರುದ್ಧ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಮಡಿಗಾ ಸಮುದಾಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com