"ಕರ್ನಾಟಕ ಸಿಎಂ ಆಗಿ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ": ನಾಯಕತ್ವ ಬದಲಾವಣೆ ವದಂತಿ ತಳ್ಳಿ ಹಾಕಿದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಅವರ ಆಡಳಿತಾವಧಿ 2 ವರ್ಷ ಪೂರ್ಣಗೊಳ್ಳುತ್ತಿರುವುದರ ನಡುವೆ ಅವರ ದೆಹಲಿ ಭೇಟಿ ಹಲವು ಊಹಾಪೋಹ, ವದಂತಿಗಳಿಗೆ ದಾರಿ ಮಾಡಿಕೊಟ್ಟಿದೆ. 
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ಆಡಳಿತಾವಧಿ 2 ವರ್ಷ ಪೂರ್ಣಗೊಳ್ಳುತ್ತಿರುವುದರ ನಡುವೆ ಅವರ ದೆಹಲಿ ಭೇಟಿ ಹಲವು ಊಹಾಪೋಹ, ವದಂತಿಗಳಿಗೆ ದಾರಿ ಮಾಡಿಕೊಟ್ಟಿದೆ. 

ಆದರೆ ಸಿಎಂ ಯಡಿಯೂರಪ್ಪ ಅವರು ತಮ್ಮ ದೆಹಲಿ ಭೇಟಿಯನ್ನು ಯಶಸ್ವಿ ಎಂದು ಬಣ್ಣಿಸಿದ್ದು,  ರಾಜೀನಾಮೆ, ನಾಯಕತ್ವದ ಬದಲಾವಣೆಗಳ ವಂತಿಯಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ. 

"ಬಿಜೆಪಿ ವರಿಷ್ಠರು ತಮಗೆ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸೂಚನೆ ನೀಡಿದ್ದು, ಭೇಟಿಯ ವೇಳೆ ನಾಯತಕ್ವದ ಬದಲಾವಣೆ ಕುರಿತು ಚರ್ಚೆಯಾಗಿಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ. 2023 ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು 2024 ಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ. 

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಭೇಟಿ ಮಾಡಿದ್ದಾರೆ. ಜುಲೈ 26 ಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 2 ವರ್ಷ ಪೂರ್ಣಗೊಳಿಸಲಿದ್ದಾರೆ. ಈ ನಡುವೆ ನಾಯತಕ್ವದ ಬದಲಾವಣೆಯ ಊಹಾಪೋಹಗಳ ನಡುವೆಯೇ ಸಿಎಂ ದೆಹಲಿ ಭೇಟಿ ಕುತೂಹಲ ಮೂಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com