ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಹೇಳಿಕೆ: ದೆಹಲಿ ತಲುಪಿದ ವಿವಾದ; ಸಿದ್ದರಾಮಯ್ಯ -ಡಿಕೆಶಿಗೆ ಹೈಕಮಾಂಡ್ ಬುಲಾವ್

ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಅನಾವಶ್ಯಕವಾಗಿ ಗೊಂದಲದ ಗೂಡಾಗಿ ಕೂತಿರುವುದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. 
ಸಿದ್ದರಾಮಯ್ಯ-ಡಿಕೆ ಶಿವಕುಮಾರ್
ಸಿದ್ದರಾಮಯ್ಯ-ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರ ಅನಾವಶ್ಯಕವಾಗಿ ಗೊಂದಲದ ಗೂಡಾಗಿ ಕೂತಿರುವುದರಿಂದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. 

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ಬಳಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಕೆಪಿಸಿಸಿ ಪುನಾರ್ರಚನೆ, ಮುಂಬರುವ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ಹಾಗೂ 25 ಎಂಎಲ್ ಸಿ ಸೀಟುಗಳ ಚುನಾವಣೆ ಸಂಬಂಧ ಚರ್ಚೆ ನಡೆಸಲಾಗುವುದು. ಕಳೆದ 10 ವರ್ಷಗಳಿಂದ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ನಡೆದಿಲ್ಲ, ಹೀಗಾಗಿ ಕೆಪಿಸಿಸಿ ಪುನಾರಚನೆ ಪ್ರಮುಖ ಅಜೆಂಡಾವಾಗಿದೆ,

ಈ ಸಂಬಂಧ ಕೆಪಿಸಿಸಿ ಮುಖಂಡರು ನೀಡುತ್ತಿರುವ ಬಹಿರಂಗ ಹೇಳಿಕೆಗಳು ಕಮ್ಮಿಯಾಗುತ್ತಾ ಬಂದಿದ್ದರೂ, ಒಳೊಗೊಳಗೆ ಇದರ ಬೇಗುದಿ ಹಾಗೆಯೇ ಕುದಿಯುತ್ತಿದೆ. ಪಕ್ಷದ ಆಂತರಿಕ ವಲಯದಲ್ಲಿ ಇನ್ನೂ ಇದು ಚರ್ಚೆಯ ವಿಷಯವಾಗಿದೆ.

ಕೆಲ ದಿನಗಳ ಹಿಂದೆ ಶಾಸಕ ಜಮೀರ್ ಅಹ್ಮದ್ ಅವರಿಂದ ಆರಂಭವಾದ ನಾಯಕತ್ವದ ವಿಚಾರ ಜಮೀರ್ ಅಹ್ಮದ್ ಅವರಿಂದ ಆರಂಭವಾದ ನಾಯಕತ್ವದ ವಿಚಾರ ಹಲವು ಆಯಾಮಗಳನ್ನು ಪಡೆದುಕೊಂಡಿತ್ತು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರ ಶಾಸಕರು ಹೇಳಿಕೆಗಳನ್ನು ನೀಡಲು ಆರಂಭಿಸಿದ್ದರು. ಒಂದು ಹಂತದಲ್ಲಿ ಈ ವಿಚಾರ ಇಬ್ಬರು ನಾಯಕರ ಪ್ರತಿಷ್ಠೆಯ ವಿಚಾರವಾಗಿ ಉರುಳಲು ಆರಂಭಿಸಿತ್ತು.

ಮುಂದಿನ ಸಿಎಂ ಯಾರು ಎಂಬ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಪತ್ರ ಬರೆದು ಎಚ್ಚರಿಕೆ ನೀಡಿದ್ದರು. ಇದಾದ ನಂತರ ಎರಡು ಬಣದ ನಾಯಕರು  ಶುಕ್ರವಾರ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಚರ್ಚೆ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು. ಅದಾದ ನಂತರ ಬಾಗೇಪಲ್ಲಿ ಮುಂತಾದ ಸ್ಥಳಗಳಿಗೆ ಒಟ್ಟಿಗೆ ಭೇಟಿ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com