ವೈರಲ್ ಆಗಿರುವ ಆಡಿಯೋ ನನ್ನದಲ್ಲ, ಅದು ನನ್ನ ದನಿಯಲ್ಲ: ನಳಿನ್ ಕುಮಾರ್ ಕಟೀಲ್

ಮಾಧ್ಯಮಗಳಲ್ಲಿ ಪ್ರಸಾರವಾದ ಆಡಿಯೋ ಖಂಡಿತವಾಗಿಯೂ ನನ್ನದಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮಾತನಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಮಾಧ್ಯಮಗಳಲ್ಲಿ ಪ್ರಸಾರವಾದ ಆಡಿಯೋ ಖಂಡಿತವಾಗಿಯೂ ನನ್ನದಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮಾತನಾಡುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ಆಡಿಯೋ ಕುರಿತು ಸುದ್ದಿಗಾರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿರುವ ಕಟೀಲ್ ಅವರು, ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. 

ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com