ಬಿಜೆಪಿಗೆ ಯಡಿಯೂರಪ್ಪ ಆತ್ಮ, ಶೆಟ್ಟರ್- ಈಶ್ವರಪ್ಪ ಕಣ್ಣು: ಡ್ಯಾಮೇಜ್ ಕಂಟ್ರೋಲ್ ಗೆ ಕಟೀಲ್ ಮುಂದು?
ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ಆತ್ಮ, ಬಿಎಸ್ ವೈ ನಮ್ಮ ಸರ್ವ ಸಮ್ಮತದ ನಾಯಕ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
Published: 19th July 2021 12:25 PM | Last Updated: 19th July 2021 01:16 PM | A+A A-

ಯಡಿಯೂರಪ್ಪ
ಮಂಗಳೂರು: ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ಆತ್ಮ, ಬಿಎಸ್ ವೈ ನಮ್ಮ ಸರ್ವ ಸಮ್ಮತದ ನಾಯಕ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಮಾತನನಾಡಿದ್ದರೆಂಬ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯದಲ್ಲಿ ಯಾವುದೇ ನಾಯಕತ್ಲ ಬದಲಾವಣೆಯ ಚರ್ಚೆ ನಡೆದಿಲ್ಲ, ಈಶ್ವರಪ್ಪ- ಜಗದೀಶ್ ಶೆಟ್ಟರ್ ಸೇರಿದಂತೆ ಯಾವ ಸಚಿವರ ಬದಲಾವಣೆ ಬಗ್ಗೆಯೂ ಚರ್ಚಿಸಿಲ್ಲ, ಅವರಿಬ್ಬರು ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಹೇಳಿದ ಕಟೀಲ್, ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯುತ್ತೇನ, ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ ಎಂದಿದ್ದಾರೆ.
ಆಡಿಯೋ ಬಗ್ಗೆ ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದ್ದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ. ಇವತ್ತು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಅಂತಾ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.