ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ?: ಮೇಕೆದಾಟು ವಿಚಾರವಾಗಿ ಕುಮಾರಸ್ವಾಮಿ ಸರಣಿ ಟ್ವೀಟ್
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.
Published: 20th July 2021 02:02 PM | Last Updated: 20th July 2021 02:02 PM | A+A A-

ಮೇಕೆದಾಟು-ಕುಮಾರಸ್ವಾಮಿ
ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.
ಮೇಕೆದಾಟು ವಿಚಾರವಾಗಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ''ಮೇಕೆದಾಟು ಯೋಜನೆ ಆರಂಭವಾಗದು' ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಹಾಗಿದ್ದರೆ, ಯೋಜನೆ ವಿಚಾರದಲ್ಲಿ ಕೇಂದ್ರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ? ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ? ಎಂದು ಟೀಕಿಸಿದ್ದಾರೆ.
'ಮೇಕೆದಾಟು ಯೋಜನೆ ಆರಂಭವಾಗದು' ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ @mkstalin ಹೇಳಿದ್ದಾರೆ. ಹಾಗಿದ್ದರೆ, ಯೋಜನೆ ವಿಚಾರದಲ್ಲಿ ಕೇಂದ್ರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ? ಕೇಂದ್ರ–ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ ? (1/7) pic.twitter.com/LbuWDPtopV
— H D Kumaraswamy (@hd_kumaraswamy) July 20, 2021
'ರಾಜ್ಯದ ಜನರು ಗಮನಸಿಬೇಕಾಗದ ಒಂದು ಸಂಗತಿ ಇದೆ. ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಅನುಮೋದನೆ ಸಿಕ್ಕಿದ್ದು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ. ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಲ್ಲ. ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು. ರಾಷ್ಟ್ರೀಯ ಪಕ್ಷವಿದ್ದರೂ ಅನುಮತಿ ಸಿಗುತ್ತಿಲ್ಲ. ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ. ಹೀಗಾಗಿ ಬಿಜೆಪಿ ತಮಿಳುನಾಡಿನ ಹಿತಾಸಕ್ತಿ ಕಾಯುತ್ತಿದೆ. ಯೋಜನೆ ತಡೆಯುವ ಪ್ರಯತ್ನದ ವಿರುದ್ಧ ಹೋರಾಡಬೇಕಿದ್ದ ಕಾಂಗ್ರೆಸ್ ತಮಿಳುನಾಡು ಸರ್ಕಾರದ ಪಾಲುದಾರ ಪಕ್ಷ. ಹೀಗಾಗಿ ಜೆಡಿಎಸ್ ಒಂದೇ ಈಗ ಮೇಕೆದಾಟು ಯೋಜನೆಗೆ ಪರಿಹಾರ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಜನರು ಗಮನಸಿಬೇಕಾಗದ ಒಂದು ಸಂಗತಿ ಇದೆ. ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಅನುಮೋದನೆ ಸಿಕ್ಕಿದ್ದು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ. ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಲ್ಲ. ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು. ರಾಷ್ಟ್ರೀಯ ಪಕ್ಷವಿದ್ದರೂ ಅನುಮತಿ ಸಿಗುತ್ತಿಲ್ಲ.6/7
— H D Kumaraswamy (@hd_kumaraswamy) July 20, 2021
ಮೇಕೆದಾಟಿನ ಡ್ಯಾಂನಿಂದ ತಮಿಳುನಾಡಿಗೆ ಯಾವ ನಷ್ಟವೂ ಇಲ್ಲ. ಆದರೂ ಡ್ಯಾಂ ನಿರ್ಮಾಣ ಆಗದಂತೆ ತಡೆಯಲು ಶತಪ್ರಯತ್ನ ಮಾಡುತ್ತಿದೆ. ಸರ್ವಪಕ್ಷ ಸಭೆ ಮಾಡಿ ಮುಂದಿನ ಕಾರ್ಯತಂತ್ರ ರೂಪಿಸಿದೆ, ಪ್ರಧಾನಿ, ಸಚಿವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ದು ಒತ್ತಡ ಹಾಕಿದೆ. ಆದರೆ, ಯೋಜನೆಯಿಂದ ಅನುಕೂಲ ಪಡೆಯಲಿರುವ ರಾಜ್ಯ ಸರ್ಕಾರ ಈವರೆಗೆ ಏನೇನು ಮಾಡಿದೆ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ. ಹೀಗಾಗಿ ಬಿಜೆಪಿ ತಮಿಳುನಾಡಿನ ಹಿತಾಸಕ್ತಿ ಕಾಯುತ್ತಿದೆ. ಯೋಜನೆ ತಡೆಯುವ ಪ್ರಯತ್ನದ ವಿರುದ್ಧ ಹೋರಾಡಬೇಕಿದ್ದ ಕಾಂಗ್ರೆಸ್ ತಮಿಳುನಾಡು ಸರ್ಕಾರದ ಪಾಲುದಾರ ಪಕ್ಷ. ಹೀಗಾಗಿ ಜೆಡಿಎಸ್ ಒಂದೇ ಈಗ ಮೇಕೆದಾಟು ಯೋಜನೆಗೆ ಪರಿಹಾರ. (7/7)
— H D Kumaraswamy (@hd_kumaraswamy) July 20, 2021