ನಾಯಕತ್ವ ಬದಲಾವಣೆ ಸಂದೇಶ ಬಂದಿಲ್ಲ, ಬಿಎಸ್'ವೈ ಸಿಎಂ ಆಗಿ ಮುಂದುವರೆಯುತ್ತಾರೆ: ಆರ್.ಅಶೋಕ
ಹೈಕಮಾಂಡ್'ನಿಂದ ನಾಯಕತ್ವ ಬದಲಾವಣೆಯ ಯಾವುದೇ ಸಂದೇಶಗಳೂ ಬಂದಿಲ್ಲ. ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಅವರು ಸ್ಪಷ್ಟಪಡಿಸಿದ್ದಾರೆ.
Published: 21st July 2021 10:24 AM | Last Updated: 21st July 2021 10:24 AM | A+A A-

ಸಚಿವ ಆರ್. ಅಶೋಕ
ಬೆಂಗಳೂರು: ಹೈಕಮಾಂಡ್'ನಿಂದ ನಾಯಕತ್ವ ಬದಲಾವಣೆಯ ಯಾವುದೇ ಸಂದೇಶಗಳೂ ಬಂದಿಲ್ಲ. ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಸಂಚಲನವನ್ನು ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಆರ್.ಅಶೋಕ ಅವರು ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರದ ನಾಯಕರು ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಯಾವುದೇ ನಿರ್ಧಾರಗಳನ್ನೂ ತೆಗೆದುಕೊಂಡಿಲಲ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಿ ಕಾಂಗ್ರೆಸ್ ಸುಖಾಸುಮ್ಮನೆ ಗೊಂದಲಗಳನ್ನು ಸೃಷ್ಟಿಸುತ್ತಿವೆ ಎಂದು ತಿಳಿಸಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ಶಾಮನೂರು ಶಿವಶಂಕರಪ್ಪ ಹಾಗೂ ಲಿಂಗಾಯತ ಮಠದ ಶ್ರೀಗಳು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ, ಬಿಜೆಪಿ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.