ಸಿಎಂ ಸ್ಥಾನದಿಂದ ಯಡಿಯೂರಪ್ಪ ನಿರ್ಗಮಿಸಿದರೆ ಏನೂ ನಷ್ಟವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬಿ ಎಸ್ ಯಡಿಯೂರಪ್ಪನವರು ಕರ್ನಾಟಕದಲ್ಲಿ ಕೆಟ್ಟ ಸರ್ಕಾರವನ್ನು ಕೊಟ್ಟಿದ್ದಾರೆ, ಹೀಗಾಗಿ ಸಿಎಂ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿದರೆ ಏನೂ ನಷ್ಟವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬಿ ಎಸ್ ಯಡಿಯೂರಪ್ಪನವರು ಕರ್ನಾಟಕದಲ್ಲಿ ಕೆಟ್ಟ ಸರ್ಕಾರವನ್ನು ಕೊಟ್ಟಿದ್ದಾರೆ, ಅಭಿವೃದ್ಧಿಪರ ಇಲ್ಲದಿರುವ, ಭ್ರಷ್ಟಾಚಾರದಲ್ಲಿ ಕೂಡಿರುವ, ಅದಕ್ಷ ಸರ್ಕಾರವನ್ನು ಕರ್ನಾಟಕದಲ್ಲಿ ನೀಡಿದರು, ಹೀಗಾಗಿ ಸಿಎಂ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿದರೆ ಏನೂ ನಷ್ಟವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರು ಅತ್ಯಂತ ಕೆಟ್ಟ ಭ್ರಷ್ಟ ಸರ್ಕಾರ ನೀಡಿದ್ದಾರೆ, ಯಡಿಯೂರಪ್ಪನವರೇ ಭ್ರಷ್ಟ, ಅವರ ಮಗನೂ ಭ್ರಷ್ಟ, ಹಾಗಾಗಿ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದರೆ ಬಹಳ ಒಳ್ಳೆಯದು ಎಂದು ಹೇಳಿದ್ದಾರೆ.

ನಾನು ಸುಮಾರು ಆರೇಳು ತಿಂಗಳಿನಿಂದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ತೆಗೆಯುತ್ತಾರೆ ಎಂದು ಹೇಳುತ್ತಾ ಬಂದಿದ್ದೆ. ಅದನ್ನು ಯಾರೂ ನಂಬಿರಲಿಲ್ಲ. ನನಗೆ ಖಚಿತ ಮಾಹಿತಿ ಇತ್ತು, ಇವತ್ತು ಅದು ಸತ್ಯವಾಗಿದೆ. ಯಡಿಯೂರಪ್ಪನವರನ್ನು ತೆಗೆಯುವುದರಿಂದ ಬಿಜೆಪಿಯಲ್ಲಿ ಮತ್ತೊಬ್ಬ ಪ್ರಾಮಾಣಿಕ ಮುಖ್ಯಮಂತ್ರಿ ಬರುತ್ತಾರೆ ಎಂದು ನಾನು ಅಂದುಕೊಂಡಿಲ್ಲ. ಬಿಜೆಪಿಯೇ ಒಂದು ಭ್ರಷ್ಟ ಪಕ್ಷ , ಅದರಲ್ಲಿರುವ ಸಚಿವರುಗಳೂ ಭ್ರಷ್ಟರು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಜಕೀಯ ಸ್ವಾರ್ಥಕ್ಕಾಗಿ ದೇಶದ ಹಿತಾಸಕ್ತಿಯನ್ನು ಬಿಜೆಪಿ ಬಲಿಕೊಡುತ್ತಿದೆ, ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಗೂಢಚಾರ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದಿಂದ ರಾಜಭವನಕ್ಕೆ ರಾಜಭವನ ಚಲೋ ನಡೆಸಿದ್ದರು. ಅದರಲ್ಲಿ ಜೆಡಿಎಸ್ ನಾಯಕ ವೈ ಎಸ್ ವಿ ದತ್ತ ಭಾಗವಹಿಸಿದ್ದು ವಿಶೇಷವಾಗಿತ್ತು. ಅದಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com