ಪೆಗಾಸಸ್ ವಿವಾದ: ತನಿಖೆಗೆ ಆಗ್ರಹಿಸಿ ಬೀದಿಗಿಳಿದ ಕಾಂಗ್ರೆಸ್, ರಾಜಭವನ ಮುತ್ತಿಗೆ ಹಾಕಲು ಯತ್ನ, ಹಲವರು ವಶಕ್ಕೆ

ಕೇಂದ್ರ ಸರ್ಕಾರ ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಅನೇಕ ಗಣ್ಯರ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನ ಚಲೋ ನಡೆಸಿ, ಸುಪ್ರೀಂ ಕೋರ್ಟ್'ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. 
ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಅನೇಕ ಗಣ್ಯರ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನ ಚಲೋ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದು, ಸುಪ್ರೀಂ ಕೋರ್ಟ್'ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. 

ಹಾಲಿ ನ್ಯಾಯಾಧೀಶರು ಸೇರಿದಂತೆ 400 ಗಣ್ಯರ ಮೇಲೆ ಕೇಂದ್ರ ಸರ್ಕಾರದಿಂದಲೇ ಗೂಢಚರ್ಯೆ ನಡೆದಿದೆ. ಪ್ರಧಾನಿ ಮೋದಿಯವರೇ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದು, ಅವರು ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯಬಾರದು ಎಂದು ಆಗ್ರಹಿಸಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿ. ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ನಾಯಕರನ್ನು ತಿಮ್ಮಯ್ಯ ವೃತ್ತದ ಬಳಿ ಪೊಲೀಸರು ವಶಕ್ಕೆ ಪಡೆಯಲಾಗಿತ್ತು. 

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ, ಶಾಸಕರು ಹಾಗೂ ಎಂಎಲ್'ಸಿಗಳನ್ನು ತಿಮ್ಮಯ್ಯ ವೃತ್ತದ ಬಳಿ ಪೊಲೀಸರು ವಶಕ್ಕೆ ಪಡೆದರು. ನಂತರ ಅವರನ್ನು ಬಿಡುಗಡೆಗೊಳಿಸಿದರು. 

ಪ್ರತಿಭಟನೆ ವೇಳೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಪತನಗೊಳಿಸಿದ ವೇಳೆ ನನ್ನ ಆಪ್ತ ಸಹಾಯಕನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಫೋನ್ ಕದ್ದಾಲಿಕೆ ಜೊತೆಗೆ ಫೋನ್ ಹ್ಯಾಕ್ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com