ಜೋಷಿ- ಬೊಮ್ಮಾಯಿ ಭೇಟಿ: ದೆಹಲಿಯಲ್ಲಿ ಬೀಡುಬಿಟ್ಟ ವಿಜಯೇಂದ್ರ; ರಾಜ್ಯ ರಾಜಕೀಯ ಬೆಳವಣಿಗೆಗಳ ಮೇಲೆ ಬಿಜೆಪಿ 'ಹೈ' ಕಣ್ಣು!
ನಾಯಕತ್ವ ಬದಲಾವಣೆ ಸಂಬಂದ ನಡೆಯುತ್ತಿರುವ ಚರ್ಚೆಗಳ ವಿಚಾರವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ.
Published: 25th July 2021 09:10 AM | Last Updated: 25th July 2021 09:10 AM | A+A A-

ಯಡಿಯೂರಪ್ಪ
ಬೆಂಗಳೂರು: ನಾಯಕತ್ವ ಬದಲಾವಣೆ ಸಂಬಂದ ನಡೆಯುತ್ತಿರುವ ಚರ್ಚೆಗಳ ವಿಚಾರವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ.
ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿವಿಧ ಕಾಮಗಾರಿಗಳನ್ನು ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ವರ್ಚ್ಯೂವಲ್ ಆಗಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ನಾನು ಸಿಎಂ ಅಧಿಕಾರ ಸ್ವೀಕರಿಸಿದ ದಿನದಿಂದ ಇಲ್ಲಿಯವರೆಗೆ ಹಲವು ಸವಾಲುಗಳನ್ನು ಎದುರಿಸಿದ್ದೇನೆ, ಅನಿರೀಕ್ಷಿತ ನೈಸರ್ಗಿಕ ವಿಕೋಪಗಳು, ಕೋವಿಡ್ ಮತ್ತು ಪ್ರವಾಹ ಸೇರಿದಂತೆ ಹಲವು ಸಂಕಷ್ಟ ಸಮಯಗಳನ್ನು ನಿಭಾಯಿಸಿದ್ದೇನೆ ಎಂದು ಹೇಳಿದರು.
ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ ಎಂದು ಸಂಪುಟದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಲಿಂಗಾಯತ ಸಮುದಾಯದ ಮಠಾಧೀಶರು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಹೀಗಾಗಿ ಸಾಕಷ್ಟು ಚಿಂತನೆ ಮತ್ತು ಪುನರ್ವಿಮರ್ಶೆ ಇದೆ ಮತ್ತು ಎಲ್ಲಾ ಅಂಶಗಳನ್ನು
ಪರಿಗಣಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಅವರು ಹೇಳಿದ್ದಾರೆ.
ಮತ್ತೊಂದು ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ಹುಬ್ಬಳ್ಳಿಗೆ ತೆರಳಿದ್ದ ಗೃಹ ಸಚಿವ ಬಸವರಾಜಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ.
ಬಸವರಾಜ ಬೊಮ್ಮಾಯಿ ಅವರ ಹೆಸರು ಸಿಎಂ ಹುದ್ದಗೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಇಬ್ಬರು ನಾಯಕರು ಸದ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಆದರೆ ಜೋಶಿ ಅವರ ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ಸೀಮಿತವಾಗಿತ್ತು ಎಂದು ಹೇಳಿದ್ದಾರೆ. ಒಂದು ವೇಳೆ ನಾಯಕತ್ವ ಬದಲಾವಣೆಯಾದರೇ ಪ್ರಹ್ಲಾದ್ ಜೋಶಿ ಮತ್ತು ಮುರುಗೇಶ್ ನಿರಾಣಿ ಅವರ ಹೆಸರು ಸಿಎಂ ಹುದ್ದೆಗೆ ಕೇಳಿ ಬರುತ್ತಿವೆ. ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಅಥವಾ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದೊಳಗಿನ ಯಾರೂ ತಮ್ಮೊಂದಿಗೆ ನಾಯಕತ್ವದ ಬದಲಾವಣೆಯ ಬಗ್ಗೆ ಚರ್ಚಿಸಲಿಲ್ಲ ಎಂದು ಅವರು ನಾನು ಕೂಡ ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.
ಏತನ್ಮಧ್ಯೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಮುಖಂಡರನ್ನು ಭೇಟಿ ಮಾಡಲು ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.