ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ದಾರಿ ಮಾಡಿಕೊಡುತ್ತದೆ: ಶಿವರಾಮೇಗೌಡ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ, ಸಂಪುಟ ವಿಸ್ತರಣೆಯು ರಾಜಕೀಯ ಅನಿಶ್ಚಿತತೆಗೆ ದಾರಿ ಮಾಡಿಕೊಡಲಿದ್ದು, ಇದರಿಂದ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಎದುರಾಗಲಿಗೆ ಎಂದು ಮಾಜಿ ಸಂಸದ ಮತ್ತು ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೆ ಗೌಡ ಅವರು ಭಾನುವಾರ ಹೇಳಿದ್ದಾರೆ.
Published: 26th July 2021 07:09 AM | Last Updated: 26th July 2021 07:33 AM | A+A A-

ಸಂಗ್ರಹ ಚಿತ್ರ
ಮೈಸೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ, ಸಂಪುಟ ವಿಸ್ತರಣೆಯು ರಾಜಕೀಯ ಅನಿಶ್ಚಿತತೆಗೆ ದಾರಿ ಮಾಡಿಕೊಡಲಿದ್ದು, ಇದರಿಂದ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಎದುರಾಗಲಿಗೆ ಎಂದು ಮಾಜಿ ಸಂಸದ ಮತ್ತು ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೆ ಗೌಡ ಅವರು ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಂದಿನ ವರ್ಷವೇ ರಾಜ್ಯದಲ್ಲಿ ಚುನಾವಣೆ ಎದುರಾದರೂ ಯಾರೊಬ್ಬರೂ ಆಶ್ಚರ್ಯಪಡುವಂತಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಇಬ್ಬಾಗವಾಗಿದೆ. ಒಂದು ಭಾಗ ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ, ಮತ್ತೊಂದು ಭಾಗ ಯಡಿಯೂರಪ್ಪ ಅವರನ್ನು ಸ್ಥಾನದಿಂದ ಕೆಳಗಿಳಿಸಲು ನೋಡುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕೊರೋನಾ ಸಾಂಕ್ರಾಮಿಕ ರೋಗ ಹಾಗೂ ಪ್ರವಾಹ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ ರೀತಿಗೆ ತೀವ್ರವಾಗಿ ಕಿಡಿಕಾರಿದ್ದಾರೆ.