ನನಗೆ ಏನೂ ಗೊತ್ತಿಲ್ಲ, ಹಿರಿಯ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ- ಮುರುಗೇಶ್ ನಿರಾಣಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ

ನವದೆಹಲಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೆ ಇನ್ನೊಂದೆಡೆ ಹೈಕಮಾಂಡ್ ಬುಲಾವ್ ಕೊಟ್ಟಿದೆಯಾ? ಅಥವಾ ಸ್ವಯಂ ದೆಹಲಿಗೆ ಹೊರಟ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ದೆಹಲಿಯ ಕರ್ನಾಟಕ ಭವನದಿಂದ ಭಾನುವಾರ ರಾತ್ರಿ ಕಾರಿನಲ್ಲಿ ಹೊರಟ ಮುರುಗೇಶ್ ನಿರಾಣಿ ಅವರನ್ನು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿದ್ದೀರಾ?ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ನನಗೆ ಏನೂ ಗೊತ್ತಿಲ್ಲ, ನಾನು ಈ ಬಗ್ಗೆ ಯಾರನ್ನೂ ಕೇಳಿಲ್ಲ, ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳುತ್ತಾರೆ. ಕೆಲ ವೈಯಕ್ತಿಕ ಕೆಲಸಕ್ಕಾಗಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.

ಈ ಹಿಂದೆ ಕೂಡಾ ಮುಖ್ಯಮಂತ್ರಿ ರೇಸ್ ನಲ್ಲಿ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದಿತ್ತು. ಆದರೆ, ನಾನು ಸಿಎಂ ರೇಸ್ ನಲ್ಲಿ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ನನಗೆ ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇನೆ. ಅಲ್ಲದೆ ಯಡಿಯೂರಪ್ಪನವರೆ ಮುಂದಿನ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದರು.  

ಆದಾಗ್ಯೂ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾವಣೆ ಕುರಿತು ಊಹಾಪೋಹಗಳ ನಡುವೆ ಮುರುಗೇಶ್ ನಿರಾಣಿ ಏಕಾಏಕಿ ದೆಹಲಿ ಭೇಟಿ ತೀವ್ರ ರೀತಿಯ ಕುತೂಹಲಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com