ಪ್ರಧಾನಿ ನಾಯಕತ್ವದಡಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ- ಯಡಿಯೂರಪ್ಪ

ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಬಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿಯಲ್ಲಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. 

ಎಲ್ಲಾ ಶಾಸಕರ ಒಮ್ಮತದ ನಿರ್ಧಾರ. ಬಸವರಾಜ್ ಬೊಮ್ಮಾಯಿ ಅವರಿಗೆ ಪಕ್ಷದ ಒಳಗಡೆ ಮಾತ್ರವಲ್ಲದೇ ಹೊರಗಡೆಯೂ ಗೌರವವಿದೆ. ಅವರು ನಾಳೆ  ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com