ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಜನಪರ, ನ್ಯಾಯಸಮ್ಮತ ಆಡಳಿತಕ್ಕೆ ಸಂಕಲ್ಪ- ಬಸವರಾಜ ಬೊಮ್ಮಾಯಿ

ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಜನಪರ, ಬಡಜನರ ಪರವಾದ ನ್ಯಾಯಸಮ್ಮತದ ಆಡಳಿತ ಕೊಡುವ ಸಂಕಲ್ಪ ಮಾಡಿರುವುದಾಗಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನೂತನ ಸಿಎಂ ಆಗಿ ಆಯ್ಕೆಯಾಗಿರುವ  ಬಸವರಾಜ ಬೊಮ್ಮಾಯಿ
ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಜನಪರ, ಬಡಜನರ ಪರವಾದ ನ್ಯಾಯಸಮ್ಮತದ ಆಡಳಿತ ಕೊಡುವ ಸಂಕಲ್ಪ ಮಾಡಿರುವುದಾಗಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಹೆಜ್ಜೆ ಇಟ್ಟು, ಬಡವರ, ರೈತರ, ಹಿಂದುಳಿದ, ದಲಿತ ವರ್ಗದವರ ಕಲ್ಯಾಣಕ್ಕೆ ಕೆಲಸ ಮಾಡುತ್ತೇನೆ.ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಮುಂದುವರೆಸಿ ಜನಪರ, ಬಡವರ, ನ್ಯಾಯಪರ ಆಡಳಿತವನ್ನು ಕೊಡಬೇಕು ಎಂಬ ಸಂಕಲ್ಪ ಮಾಡಿದ್ದೇನೆ. ಪ್ರತಿಯೊಂದು ವಿಚಾರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುವುದಾಗಿ ತಿಳಿಸಿದರು.

ಯಡಿಯೂರಪ್ಪ 40 ವರ್ಷ ಬೆವರು ಸುರಿಸಿ ಪಕ್ಷ ಕಟ್ಟಿದ್ದಾರೆ. ಎರಡು ಬಾರಿ ಕೋವಿಡ್, ಪ್ರವಾಹದಂತಹ ಸಂಕಷ್ಟದ ಸಂದರ್ಭವನ್ನು ಎದುರಿಸಿ ರಾಜ್ಯವನ್ನು ಮುನ್ನಡೆಸಿದ್ದಾರೆ. ಹಣಕಾಸಿನ ಕೊರತೆಯಾಗದಂತೆ ನಿರ್ವಹಣೆ ಮಾಡಿದ್ದಾರೆ ಎಂದರು. ನಾಳೆ ಬೆಳಗ್ಗೆ 11 ಗಂಟೆಗೆ ತಾನೊಬ್ಬನೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com