ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಬಿಡಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನಿಸುತ್ತಾರೆ: ಬಿಸಿ ಪಾಟೀಲ್

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆಂದು ಮಾಜಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿಪಾಟೀಲ್ ಅವರು ಹೇಳಿದ್ದಾರೆ. 
ಬಿಸಿ ಪಾಟೀಲ್
ಬಿಸಿ ಪಾಟೀಲ್

ಬೆಂಗಳೂರು: ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎನ್ನುವುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆಂದು ಮಾಜಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿಪಾಟೀಲ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ, ಯಾರನ್ನು ಬಿಡುತ್ತಾರೆ ಎಂಬುದರ ಯಾವುದೇ ಮಾಹಿತಿಗಳು ಬಂದಿಲ್ಲ. ಊಹಾಪೋಹ ಕಲ್ಪನೆಯ ಸುದ್ದಿಗಳಿಗೆಲ್ಲ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.

ಪಕ್ಷ ಬಿಟ್ಟು ಬಂದಾಗಲೇ ನಾವೆಲ್ಲ ಆತಂಕಪಡಲಿಲ್ಲ. ಪಕ್ಷ ಬಿಟ್ಟು ಬಂದಾಗ ನಮ್ಮನ್ನು ಬಿಜೆಪಿ ಚೆನ್ನಾಗಿ ನಡೆಸಿಕೊಂಡು ಮಂತ್ರಿ ಸ್ಥಾನ ನೀಡಿತ್ತು. ಎಲ್ಲವೂ ವರಿಷ್ಠರ ಗಮನದಲ್ಲಿದೆ. ಹೊಸದಾಗಿ ಹೇಳುವಂತಹದ್ದೇನಿಲ್ಲ. ಬಿಜೆಪಿ ಪಕ್ಷ ರಾಜಕೀಯವಾಗಿ ಬಹಳ ದೊಡ್ಡ ಪಕ್ಷ.ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com