ಬೊಮ್ಮಾಯಿ ಪದಗ್ರಹಣದ ನಂತರ ಸಂಪುಟ ಪುನಾರಚನೆ: ಬಿಎಸ್ ವೈ ನಿಷ್ಠರು- ಹಿರಿಯ ಬಿಜೆಪಿ ನಾಯಕರಿಗೆ ಕೊಕ್?

61 ವರ್ಷದ ಬಸವರಾಜ ಬೊಮ್ಮಾಯಿ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಇದರ ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದ ಕೆಲ ಹಿರಿಯ ನಾಯಕರಿಗೆ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದೆಯೇ ಇಲ್ಲವೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.
ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ
ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ

ಬೆಂಗಳೂರು: 61 ವರ್ಷದ ಬಸವರಾಜ ಬೊಮ್ಮಾಯಿ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಇದರ ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದ ಕೆಲ ಹಿರಿಯ ನಾಯಕರಿಗೆ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದೆಯೇ ಇಲ್ಲವೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿದ ದಿನದ ನಂತರ, ಕೆಲವು ಹಿರಿಯ ನಾಯಕರು, ಬಿಎಸ್ ವೈ ನಿಷ್ಠಾವಂತರು ಸೇರಿದಂತೆ ಹಲವು ನಾಯಕರಿಗೆ ಕೊಕ್ ನೀಡುವ ಸಾಧ್ಯತೆಯಿದೆ, ಇದರೊಂದಿಗೆ ಬೊಮ್ಮಾಯಿ ಅವರ ಹೊಸ ಸಂಪುಟದಲ್ಲಿ ಯಡಿಯೂರಪ್ಪ ನಿಷ್ಠರನ್ನು ಹೊರಗಿಡುವ ಸಂಭವವಿದೆ, ಕೇಂದ್ರ ಬಿಜೆಪಿ ನಾಯಕರು  ಸಂಪುಟವನ್ನು ಪುನಾರಚಿಸುವ ಸಂಭವವಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಜಗದೀಶ್ ಶೆಟ್ಟರ್ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು, ಆದರೆ ಬೊಮ್ಮಾಯಿ ಆಡಳಿತದಲ್ಲಿ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. 

ಹಿರಿಯರಾಗಿದ್ದರು ಶೆಟ್ಟರ್ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಲು ಸಮ್ಮತಿಸಿದ್ದರು.  ಇವರ ಜೊತೆಗೆ ಬಿಜೆಪಿ ಹಿರಿಯ ನಾಯಕ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆಯಿದೆ.ಆದರೆ ಇದೆಲ್ಲಾ ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ.

ಸರ್ಕಾರವನ್ನು ರಚಿಸಲು ಸಹಾಯ ಮಾಡಿದ್ದಕ್ಕಾಗಿ ಯಡಿಯೂರಪ್ಪ ಅವರು ಸಂಪುಟದಲ್ಲಿ ಸೇರಿದ್ದ ಕೆಲವರಿಗೆ ಸ್ಥಾನ ಸಿಗಬಹುದೆಂದು ರಾಜ್ಯ ಬಿಜೆಪಿ ಘಟಕದ ಅನೇಕ ನಾಯಕರು ನಂಬಿದ್ದಾರೆ, ಆದರೆ ಅದೇ ಖಾತೆಗಳನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಖಚಿತವಾಗಿಲ್ಲ.

ಜೆಡಿಎಸ್-ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ್ದ ಹಲವು ಶಾಸಕರಿಗೆ ಪ್ರಮುಖ ಖಾತೆ ನೀಡಲಾಗಿತ್ತು, ಆದರೆ ಬೊಮ್ಮಾಯಿ ಯಡಿಯೂರಪ್ಪ ಅವರ ಆಪ್ತರಾಗಿರುವ ಕಾರಣ ವಲಸೆ ಶಾಸಕರ ಸ್ಥಾನವನ್ನು ವಾಪಸ್ ಪಡೆಯುವ ಸಾಧ್ಯತೆಯಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಕ್ಲಿಪ್ ನಲ್ಲಿ ನಾಯಕತ್ವದ ಬದಲಾವಣೆಯನ್ನು ಮತ್ತು ಹಿರಿಯ ಮಂತ್ರಿಗಳನ್ನು ಕೈಬಿಡುವ ವಿಷಯವನ್ನು ಪ್ರಸ್ತಾಪಿಸಿದ್ದು ರಾಜಕೀಯ ವಲಯಗಳಲ್ಲಿ ಬಿರುಗಾಳಿ ಸೃಷ್ಟಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com