ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

'ಕೇಂದ್ರ ನಾಯಕರೊಂದಿಗಿನ ಮೊದಲ ಭೇಟಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ': ಸಿಎಂ ಬೊಮ್ಮಾಯಿ

ದೆಹಲಿಯಲ್ಲಿ ಕೇಂದ್ರ ನಾಯಕರೊಂದಿಗಿನ ಮೊದಲ ಭೇಟಿಯ ವೇಳೆ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ನಾಯಕರೊಂದಿಗಿನ ಮೊದಲ ಭೇಟಿಯ ವೇಳೆ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ನಾನು ಕೇಂದ್ರ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಅವರು ಸಮಯ ನೀಡಿದರೆ ನಾನು ಶುಕ್ರವಾರ ದೆಹಲಿಗೆ ಹೊರಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ನನಗೆ ಶುಭ ಹಾರೈಸಿದ್ದಾರೆ. ಮೋದಿ, ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಇತರ ಉನ್ನತ ನಾಯಕರಿಗೆ ಅಭಿನಂದನೆ ತಿಳಿಸಲು ಅವರನ್ನು ಭೇಟಿ ಮಾಡುತ್ತಿದ್ದೇನೆ. ಈ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

ಸಂಪುಟ ರಚನೆ ವೇಳೆ ಒತ್ತಡ ಸಾಮಾನ್ಯ. ಪಕ್ಷ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಸಮರ್ಥಿಸಿಕೊಂಡರು.

ಬೊಮ್ಮಾಯಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡುವ ಮೊದಲು ಹೈಕಮಾಂಡ್ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಏಕೆಂದರೆ ಪ್ರಮುಖ ಖಾತೆಗಳನ್ನು ಹೊಂದಿದ್ದ ಹಿರಿಯ ನಾಯಕರನ್ನು ಬಿಡಲು ಯೋಚಿಸಲಾಗಿದೆ.

ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪರಿಹಾರದ ವಿಳಂಬ ಕುರಿತ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಜಿಎಸ್‌ಟಿ ಪರಿಹಾರ ಈ ವರ್ಷ 18000 ಕೋಟಿ ಕೊರತೆ ಇದೆ.  ಅದರ ಸಾಲವನ್ನು ಸೆಸ್‌ ಮೂಲಕ ತೀರಿಸುವ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ದೊರೆಯಬೇಕಾದ ಜಿಎಸ್‌ಟಿ ಪರಿಹಾರ ಮೊತ್ತ ಪಡೆಯಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com