'ಶಿಕ್ಷಣ ಸಚಿವರದ್ದು ಎಡಬಿಡಂಗಿ ನಿರ್ಧಾರ: ಸರ್ಕಾರದ ದೌರ್ಬಲ್ಯದಿಂದ ಅಧಿಕಾರಿಗಳು ಸೂಪರ್ ಮ್ಯಾನ್ ಗಳಂತಾಡುತ್ತಿದ್ದಾರೆ'

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಕಿಡಿಕಾರಿದ್ದಾರೆ. 

'ಪ್ರಜಾಪ್ರಭುತ್ವದ ಮೂರು ಮಂಗಗಳು' ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ  ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್ಮ್ಯಾನ್ ಗಳಂತೆ ವರ್ತಿಸುತ್ತಿದ್ದಾರೆ.

ಇದು ಮುಖ್ಯಮಂತ್ರಿಯ ದೌರ್ಬಲ್ಯವೋ? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಕೋಟ್ಯಂತರ ರೂಪಾಯಿಗಳ ಆವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com