ಹೈಕಮಾಂಡ್ ಬಯಸಿದರೆ ತಕ್ಷಣ ರಾಜೀನಾಮೆ ನೀಡಲು ನಾನು ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಫೋಟಕ ಹೇಳಿಕೆ 

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಮತ್ತು ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ಇಂದು ವಿಧಾನಸೌಧದಲ್ಲಿ ನೀಡಿದ್ದಾರೆ.

ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಎಂದು ವರಿಷ್ಠರು ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ ಎಂದರು.

ಪರ್ಯಾಯ ನಾಯಕರಿಲ್ಲ ಎಂಬ ಭಾವನೆಯಿಲ್ಲ: ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಹೈಕಮಾಂಡ್ ಸೂಚನೆ ನೀಡಿದರೆ ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com