ಯಡಿಯೂರಪ್ಪ ರಾಜೀನಾಮೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ..
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಕುರಿತ ಹೇಳಿಕೆ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಮುಖಂಡರು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.
Published: 06th June 2021 04:20 PM | Last Updated: 07th June 2021 12:28 PM | A+A A-

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಕುರಿತ ಹೇಳಿಕೆ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಮುಖಂಡರು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರಗಾರಿಕೆ ಇದೆ ಎಂದರು.
ಯಡಿಯೂರಪ್ಪ ಅವರ ಹೇಳಿಕೆಯನ್ನು ಎರಡ್ಮೂರು ರೀತಿಯಲ್ಲಿ ಬೇಕಾದರೂ ವಿಶ್ಲೇಷಣೆ ಮಾಡಬಹುದು. ನನ್ನನ್ನು ಮುಟ್ಟಿ ನೋಡಿ ಎಂಬ ಎಚ್ಚರಿಕೆ ಇರಬಹುದು, ನಾನು ಶಿಸ್ತಿನ ಸಿಪಾಯಿ ಎಂದೂ ಇರಬಹುದು. ರಾಜ್ಯ ಹಾಗೂ ಬಿಜೆಪಿ ರಾಜಕಾರಣದಲ್ಲಿ ಯಡಿಯೂರಪ್ಪ ಗಟ್ಟಿ ನಾಯಕ ಎಂದರು.
ಬಿಜೆಪಿಯಲ್ಲಿನ ಏಳೆಂಟು ಮುಖಂಡರು ತಾವೇ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ಧವಾಗಿದ್ದಾರೆ. ಮುಂದೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎನ್ನುವವರು, ಹಿಂದೆ ತಾವೇ ಸೂಟ್ ಹೊಲಿಸಿ, ಮುಹೂರ್ತ ಇಟ್ಟುಕೊಂಡು ಸಿದ್ಧವಾಗಿದ್ದಾರೆ. ಎಲ್ಲವೂ ನಮಗೆ ಗೊತ್ತಿದೆ. ಬಿಜೆಪಿಯವರು ಶಿಸ್ತನ್ನು ಕಳೆದುಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.