ಬಿ.ವೈ. ವಿಜಯೇಂದ್ರ
ಬಿ.ವೈ. ವಿಜಯೇಂದ್ರ

ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್: ಬಿಜೆಪಿ ನಾಯಕರೇ ಆರೋಪಿಸಿರುವಾಗ ಕ್ರಮ ಕೈಗೊಳ್ಳದಿರುವುದೇಕೆ- ಕಾಂಗ್ರೆಸ್ 

ಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಿ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ಹಲವು ಬಿಜೆಪಿ ನಾಯಕರೇ ಆರೋಪಿಸಿರುವಾಗ ಕ್ರಮ ಕೈಗೊಳ್ಳದಿರುವುದೇಕೆ ಎಂದು ರಾಜ್ಯ ಬಿಜೆಪಿಯನ್ನು ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು: ಸರ್ಕಾರದ ಕೆಲಸಗಳಲ್ಲಿ ಮೂಗು ತೂರಿಸಿ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ಹಲವು ಬಿಜೆಪಿ ನಾಯಕರೇ ಆರೋಪಿಸಿರುವಾಗ ಕ್ರಮ ಕೈಗೊಳ್ಳದಿರುವುದೇಕೆ ಎಂದು ರಾಜ್ಯ ಬಿಜೆಪಿಯನ್ನು ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನಿಸಿದೆ.

ಬಿ.ವೈ.ವಿಜಯೇಂದ್ರ ಜಾರಿ ನಿರ್ದೇಶನಾಲಯದ ವಿಚಾರಣೆಗಾಗಿ ದೆಹಲಿಗೆ ಹೋಗಿದ್ದರು ಎಂದು ಸ್ವತಃ ಬಿಜೆಪಿ ಶಾಸಕ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಮಾರಿಷಸ್‌ನಲ್ಲಿ ಬಿವೈ ವಿಜಯೇಂದ್ರ ಅವರ ಅಕ್ರಮ ಸಂಪತ್ತಿದೆ, ಕಿಯಾ ಕಂಪೆನಿಯೊಂದಿಗೆ ಅಕ್ರಮ ವ್ಯವಹಾರ ನಡೆದಿದೆ, ಹಾಗಾಗಿಯೇ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ಈ ಹೇಳಿಕೆಗಳ ಆಧಾರದಲ್ಲಿ ಐಟಿ, ಇಡಿ ತನಿಖಾ ಸಂಸ್ಥೆಗಳ ದಾಳಿ ಏಕಿಲ್ಲ, ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ಲೂಟಿಯ ಬಗ್ಗೆ ತಾವು ತುಟಿ ಬಿಚ್ಚುತ್ತಿಲ್ಲವೇಕೆ? ಎಂದು ಕಾಂಗ್ರೆಸ್  ಪ್ರಶ್ನಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com