ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹಕ್ಕೆ ಮುಂದಾದರೆ ಕಠಿಣ ಕ್ರಮ- ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ. 
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ. 

ಒಂದೆಂಡೆ ಬಿಎಸ್ ಯಡಿಯೂರಪ್ಪನವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಕೆಲ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದರೆ ಇದಕ್ಕೆ ಪ್ರತಿಯಾಗಿ ಯಡಿಯೂರಪ್ಪನವರ ಪರ ಇರುವವರು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಯಡಿಯೂರಪ್ಪನವರು ಸದ್ಯ ತಮ್ಮ ಶಾಸಕರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. 

ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 

ಇದರ ಮಧ್ಯೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹಲವು ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com