'ಹಾದಿ-ಬೀದಿಯಲ್ಲಿ ನಿಂತು ಒಬ್ಬೊಬ್ಬ ನಾಯಕ ಒಂದೊಂದು ಹೇಳಿಕೆ: ನೊಂದ ಸಿಎಂ ರಾಜಿನಾಮೆ ಮಾತು'
ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.
Published: 08th June 2021 07:54 AM | Last Updated: 08th June 2021 12:14 PM | A+A A-

ಯಡಿಯೂರಪ್ಪ
ಬೆಳಗಾವಿ: ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಯಡಿಯೂರಪ್ಪ ಅವರ ಮನಸ್ಸಿಗೆ ಆದ ಬೇಸರದಿಂದ ಹಾಗೆ ಹೇಳಿದ್ದಾರೆ. ಅನೇಕರು ಬೇರೆ ಬೇರೆ ತರಹ ಮಾತನಾಡಿದ್ದರಿಂದ ಈ ರೀತಿ ಹೇಳಿರಬಹುದು ಎಂದಿದ್ದಾರೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೊಂದಿದ್ದಾರೆ. ಆದ್ದರಿಂದಲೇ, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂಬ ಮಾತುಗಳನ್ನು ಆಡಿದ್ದಾರೆ' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಪ್ರತಿ ದಿನ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದರೆ ಆಡಳಿತ ಯಂತ್ರದ ಮೇಲೆ ಪರಿಣಾಮ ಬಿರುತ್ತದೆ. ಅಲ್ಲದೇ ಅದು ಮಕ್ಕಳ ಆಟವಾಗುತ್ತದೆ. ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ' ಎಂದರು.
'ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯುತ್ತದೆ. ಯಾರೋ ದೆಹಲಿಗೆ ಹೋಗಿ ಬಂದರೆ ಮುಖ್ಯಮಂತ್ರಿ ಬದಲಾವಣೆಗೆ ಹೋಗಿದ್ದಾರೆ ಎನ್ನಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ' ಎಂದರು.