ತೈಲ ಬೆಲೆ ತಗ್ಗಿಸುವುದೇ ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್: ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ದೇಶದ ಜನತೆಗೆ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಅದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಕೆ. ಶಿವಕುಮಾರ್
ಡಿಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರ ದೇಶದ ಜನತೆಗೆ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಅದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು ತಮ್ಮ ಮಕ್ಕಳ ಯೋಗಕ್ಷೇಮವನ್ನೂ ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತೈಲ ಬೆಲೆ ತಗ್ಗಿಸುವುದೇ ಸರ್ಕಾರದ ನಿಜವಾದ ಪರಿಹಾರ ಎಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ದೇಶದ ಅನೇಕ ನಗರಗಳಲ್ಲಿ, ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂಪಾಯಿ ದಾಟಿದೆ. ಕೊರೋನಾ ಆರ್ಥಿಕ ಸಂಕಷ್ಟದ ಮಧ್ಯೆ ಇಂಧನ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com