ತೈಲ ಬೆಲೆ ಏರಿಕೆಗೆ ಖಂಡನೆ: '100 ನಾಟ್​ಔಟ್' ಹೆಸರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಲಿದೆ.

Published: 10th June 2021 08:19 AM  |   Last Updated: 10th June 2021 12:32 PM   |  A+A-


Congress supporters protest against the rise in fuel prices in front of the DC’s office, in Shivamogga on Wednesday

ಕಾಂಗ್ರೆಸ್ ಬೆಂಬಲಿಗರಿಂದ ಪ್ರತಿಭಟನೆ

Posted By : Manjula VN
Source : The New Indian Express

ಬೆಂಗಳೂರು; ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಶುಕ್ರವಾರ ಆರಂಭಿಸಲಿದೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಐದು ದಿನಗಳ ಕಾಲ ಈ ಪ್ರತಿಭಟನೆ ನಡೆಯಲಿದೆ.

ರಾಜ್ಯದ ಎಲ್ಲಾ ಭಾಗಗಳಿಂದರೂ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಕರೆ ನೀಡಿದ್ದಾರೆ. 

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ಕಳೆದ 12 ತಿಂಗಳುಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ರೂ.30 ರಷ್ಟು ಹೆಚ್ಚಳವಾಗಿದೆ. ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಈಗಾಗಲೇ ಉದ್ಯೋಗ ಇಲ್ಲದೆ, ವೇತನ ಕಡಿತಗೊಂಡು ಸಂಕಷ್ಟಕ್ಕೆ ಸಿಲುಕಿರುವ ಸಾಮಾನ್ಯ ಜನರ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ ಎಂದು ಕಿಡಿಕಾರಿದ್ದಾರೆ. 

ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡಿ, ತೈಲ ಬೆಲೆ ರೂ.100ರ ಗಡಿ ದಾಡಿದೆ. ಇದು ಅಂತರಾಷ್ಟ್ರೀಯ ತೈಲ ಕಂಪನಿಗಳು ಏರಿಕೆ ಮಾಡಿದ್ದರಿಂದಾಗಿಲ್ಲ. ಮೋದಿ ಸರ್ಕಾರ್ದ ಇಂಧನದ ಮೇಲಿನ ಕಠಿಣ ತೆರಿಗೆಯಿಂದಾಗಿ ಹೆಚ್ಚಳವಾಗಿದೆ ಎಂದಿದ್ದಾರೆ. 

ಶಾಸಕರಾದ ಪ್ರಿಯಾಂಕ್ ಖರ್ಗೆ ಮತ್ತು ರಿಜ್ವಾನ್ ಅರ್ಷದ್ ಕೂಡ ಸಾಮಾನ್ಯ ನಾಗರಿಕನ ಮೇಲೆ ಹೊರೆಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 


Stay up to date on all the latest ರಾಜಕೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp