ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ? ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?

ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. 

Published: 10th June 2021 11:19 AM  |   Last Updated: 10th June 2021 12:34 PM   |  A+A-


Siddaramaiah

ಸಿದ್ದರಾಮಯ್ಯ

Posted By : Shilpa D
Source : Online Desk

ಬೆಂಗಳೂರು: ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. 

ಮೈಸೂರು ಜಿಲ್ಲೆಯ ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್‌ನ ಸಾ.ರಾ ಮಹೇಶ್ ಕಾರಣ. ಸಂಸದ ಪ್ರತಾಪ್‌ ಸಿಂಹ ಅವರು ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದ್ದರು. ಈಗ ಶಿಲ್ಪಾನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಪ್ರತಾಪ್‌ ಸಿಂಹ, ‘ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ?! ಅಂದಹಾಗೆ, ನೀವು ಮುಖ್ಯಮಂತ್ರಿಯಾಗಿದ್ದಾಗ ನಿಮ್ಮ ಶಿಷ್ಯ ಮರಿಗೌಡ ಡಿಸಿ ಶಿಖಾರನ್ನು ಅವಾಚ್ಯ ಪದಗಳಿಂದ ಸಾರ್ವಜನಿಕವಾಗಿ ನಿಂದಿಸಿದಾಗ ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ನೀವು ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?' ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರತಾಪ್‌ ಸಿಂಹ ಆರೋಪ ಕುರಿತು ಪ್ರತಿಕ್ರಿಯಿಸಿರುವ ಡಾ.ಯತೀಂದ್ರ ಸಿದ್ದರಾಮಯ್ಯ, ‘ಶಿಖಾ ಅವರು ಡಿಸಿಯಾಗಿ ಮೂರು ವರ್ಷಗಳ ಅವಧಿ ಪೂರೈಸಿ ನಂತರ ವರ್ಗಾವಣೆಗೊಂಡಿದ್ದರು. ಈಗಿನ ಹಾಗೆ 8 ತಿಂಗಳಿಗೇ ಎತ್ತಂಗಡಿಯಾಗಿರಲಿಲ್ಲ. ಕೊರೊನಾ ಸಂಕಷ್ಟದಲ್ಲೂ ನೀವು ಹಾಗೂ ಡಿಸಿ ಮಾಧ್ಯಮಗಳಲ್ಲಿ ಬಡಿದಾಡಿಕೊಂಡಿದ್ದು ಹಾಗೂ ಉನ್ನತ ಅಧಿಕಾರಿಗಳು ಬೀದಿರಂಪ ಮಾಡಿಕೊಂಡಿದ್ದು ಆಡಳಿತಯಂತ್ರದ ಮೇಲಿನ ನಿಮ್ಮ ಹಿಡಿತ ತಪ್ಪಿದ್ದನ್ನು ತೋರುತ್ತದೆ’ ಎಂದು ಕಿಡಿಕಾರಿದ್ದಾರೆ.


Stay up to date on all the latest ರಾಜಕೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp